ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ
Friday, August 16, 2024
ಬಜಪೆ:ಸಹಕಾರಿ ಕ್ಷೇತ್ರದಲ್ಲಿ ಅಗ್ರಗಣ್ಯ ಸಹಕಾರಿ ಸಂಸ್ಥೆಯಾಗಿ ಹೆಗ್ಗುರುತನ್ನು ಪಡಿಮೂಡಿಸಿಕೊಂಡಿರುವ ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು ಮತ್ತು ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಶ್ರೀಮತಿ ಪ್ರೆಸಿಲ್ಲಾ ಪಿರೇರಾ ಇವರಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ನೀಡಿ ಗೌರವಿಸಿದರು. ಈ ಪ್ರಶಸ್ತಿಯನ್ನು ನಿರಂತರವಾಗಿ ಕಳೆದ ಹಲವಾರು ವರ್ಷಗಳಿಂದ ಪಡೆದುಕೊಳ್ಳುತ್ತಿರುವುದು ಸಂಸ್ಥೆಯ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ. ವೇದಿಕೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕಿನ ವ್ಯವಸ್ಥಾಪನ ನಿರ್ದೇಶಕ ಗೋಪಿನಾಥ್ ಭಟ್ ಹಾಗೂ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.