-->
ರಾಜ್ಯಮಟ್ಟದ ಯುವಜನೋತ್ಸವ : ಮಂಗಳೂರು ವಿಶ್ವವಿದ್ಯಾಲಯ ಎನ್.ಎಸ್.ಎಸ್ ಘಟಕಕ್ಕೆ ಸಮಗ್ರ ಪ್ರಶಸ್ತಿ

ರಾಜ್ಯಮಟ್ಟದ ಯುವಜನೋತ್ಸವ : ಮಂಗಳೂರು ವಿಶ್ವವಿದ್ಯಾಲಯ ಎನ್.ಎಸ್.ಎಸ್ ಘಟಕಕ್ಕೆ ಸಮಗ್ರ ಪ್ರಶಸ್ತಿ

 ಮಂಗಳೂರು : ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ವಿಜಯನಗರ  ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿಯಲ್ಲಿ  ನಡೆದ 2023-  24 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯಮಟ್ಟದ ಯುವಜನೋತ್ಸವ 2024 ರಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಅತಿ ಹೆಚ್ಚು ಬಹುಮಾನಗಳನ್ನು ಗಳಿಸುವ ಮೂಲಕ ಮಂಗಳೂರು ವಿಶ್ವವಿದ್ಯಾನಿಲಯ ಎನ್.ಎಸ್.ಎಸ್ ಘಟಕ ಸಮಗ್ರ ಪ್ರಶಸ್ತಿ,ಪಡೆಯಿತು.  
 ಬಳ್ಳಾರಿ ವಿಶ್ವವಿದ್ಯಾಲಯದ ಬಯಲು ರಂಗ ಮಂದಿರದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ವಿಶ್ವವಿದ್ಯಾಲಯದ ಕುಲ ಸಚಿವರಾದ ರುದ್ರೇಶ್ ಎಸ್. ಎನ್ ಅವರು ಸಮಗ್ರ ಪ್ರಶಸ್ತಿಯನ್ನು ತಂಡಕ್ಕೆ ನೀಡಿ ಗೌರವಿಸಿದರು 
 ಚರ್ಚಾ ಸ್ಪರ್ಧೆ,  ಚಿತ್ರಕಲಾ ,  ಪ್ರಹಸನ,  ಜಾನಪದ ಸಮೂಹ ನೃತ್ಯ,  ಸಮೂಹ ಗಾನ ಈ ಐದು ಸ್ಪರ್ಧೆಗಳಲ್ಲಿ ಪ್ರಥಮ,  ವೈಯಕ್ತಿಕ ನೃತ್ಯ ಸ್ಪರ್ಧೆಯಲ್ಲಿ ದ್ವಿತೀಯ, ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆಯುವ ಮೂಲಕ ಅತಿ ಹೆಚ್ಚು ಅಂಕಗಳನ್ನು ಗಳಿಸಿ ಸಮಗ್ರ ಪ್ರಶಸ್ತಿ ಪಡೆಯಿತು, ಸ್ಪರ್ಧೆಯಲ್ಲಿ ಮಂಗಳೂರಿನ ಎಸ್. ಡಿ. ಎಂ ಕಾಲೇಜ್ ಆಫ್ ಬಿಜಿನೆಸ್ ಮ್ಯಾನೇಜ್ಮೆಂಟ್ ನ ಸ್ವಯಂಸೇವಕ ಹೃಷಿಕೇಶ್,  ಕುಂದಾಪುರದ ಬಿ.ಬಿ .ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸುಜಯ್ ಕುಮಾರ್ ಶೆಟ್ಟಿ,  ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಮೇಘನಾ ಆರ್ ಶೆಟ್ಟಿ,  ಮಂಗಳೂರಿನ  ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ಸುರಕ್ಷಾ ಆರ್  ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿದ್ದರು.  
ಮಂಗಳೂರು ವಿ.ವಿ ತಂಡದ ಅಧಿಕಾರಿಯಾಗಿ ಕುಂದಾಪುರದ ಡಾ .ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲ ಮತ್ತು ಎನ್. ಎಸ್ .ಎಸ್ ಕಾರ್ಯಕ್ರಮಾಧಿಕಾರಿ ಡಾ. ಚೇತನ್ ಶೆಟ್ಟಿ ಕೋವಾಡಿ ಭಾಗವಹಿಸಿದ್ದರು. ವಿಜೇತರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯೋಜನಾಧಿಕಾರಿ ಡಾ . ಶೇಷಪ್ಪ ಕೆ.  ಅಭಿನಂದನೆ ಸಲ್ಲಿಸಿದ್ದಾರೆ.

Ads on article

Advertise in articles 1

advertising articles 2

Advertise under the article