ಹಳೆಯಂಗಡಿ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ನೂತನ ವಾಹನದ ಲೋಕಾರ್ಪಣೆ
Friday, August 16, 2024
ಹಳೆಯಂಗಡಿ : ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಹಳೆಯಂಗಡಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು .ಈ ಸಂದರ್ಭ ಸೊಸೈಟಿ ಉಪಯೋಗಕ್ಕೆ ಖರೀದಿಸಿರುವ ನೂತನ ವಾಹನದ ಲೋಕಾರ್ಪಣೆ ಕಾರ್ಯಕ್ರಮ ಸೊಸೈಟಿಯಯ ಆವರಣದಲ್ಲಿ ನಡೆಯಿತು
ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತಸರ ಶಶಿಂದ್ರ ಕುಮಾರ್ ನೂತನ ವಾಹನವನ್ನು ಲೋಕಾರ್ಪಣೆಗೊಳಿಸಿದರು. ಪ್ರಿಯದರ್ಶಿನಿ ಸೊಸೈಟಿಯ ಅಧ್ಯಕ್ಷ ಎಚ್ .ವಸಂತ್ ಬೆರ್ನಾಡ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು
ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಚಂದ್ರಹಾಸ ಸನಿಲ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಸೊಸೈಟಿ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ ನಿರ್ದೇಶಕರಾದ ಧನಂಜಯ ಮಟ್ಟು,ಜೈ ಕೃಷ್ಣ ಕೋಟ್ಯಾನ್, ಗಣೇಶ್ ಅಮೀನ್ ಸಂಕಮಾರ್,ಉಮಾನಾಥ ಶೆಟ್ಟಿಗಾರ್, ಮಿರ್ಜಾ ಅಹಮದ್, ವಿಜಯ ಸನಿಲ್, ನವೀನ್ ಸಾಲ್ಯಾನ್ ಪಂಜ ಗೌತಮ್ ಜೈನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಪಂಚಾಯತ್ ಸದಸ್ಯರಾದ ಅಬ್ದುಲ್ ಅಜೀಜ್,ಅಬ್ದುಲ್ ಖಾದರ್,
ಜಾಕ್ಸನ್ ಸಲ್ದಾನ, ಧರ್ಮಾನಂದ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು .
ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು ಪ್ರಬಂಧಕಿ ಅಕ್ಷತಾ ಶೆಟ್ಟಿ ನಿರೂಪಿಸಿದರು.