ಕಟೀಲು ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
Friday, August 23, 2024
ಕಟೀಲು : ಎಂ. ಆರ್. ಪಿ.ಎಲ್ ಸಂಸ್ಥೆಯ ವತಿಯಿಂದ
ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರೌಢಶಾಲೆ ಹಾಗೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾದ ಸಮವಸ್ತ್ರಗಳನ್ನು ವಿತರಿಸಲಾಯಿತು.
ದೇವಳದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಮಾತನಾಡಿ ದೇಗುಲವು ಶಿಕ್ಷಣಕ್ಕಾಗಿ ವಾರ್ಷಿಕ ಒಂಭತ್ತು ಕೋಟಿ ರೂಪಾಯಿಗಳಷ್ಟು ಖರ್ಚು ಮಾಡುತ್ತಿದ್ದು, ಉತ್ತಮ ವ್ಯವಸ್ಥೆಗಾಗಿ, ಆರ್ಥಿಕವಾಗಿ ಹಿಂದುಳಿದ ಮತ್ತು ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದಕ್ಕಾಗಿ ದಾನಿಗಳ ಸಹಕಾರ ಅಗತ್ಯವಾಗಿದೆ. ಕಟೀಲು ಶಿಕ್ಷಣ ಸಂಸ್ಥೆಗಳಿಗೆ ಎಂಆರ್ ಪಿಎಲ್ ಸಂಸ್ಥೆಯ ಕೊಡುಗೆ ಅಭಿನಂದನೀಯ ಎಂದರು.
ಎಂ ಆರ್ ಪಿಎಲ್ ಸಂಸ್ಥೆಯ ಸ್ಟಿವನ್ ಪಿಂಟೋ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಸಮವಸ್ತ್ರವನ್ನು ವಿತರಿಸಿ, ಗ್ರಾಮೀಣ ಭಾಗದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಹೆಮ್ಮೆ ಅನಿಸುತ್ತಿದೆ ಎಂದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲೋಕಯ್ಯ ಸಾಲಿಯನ್, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಚಂದ್ರಶೇಖರ್ ಭಟ್, ಶ್ರೀಮತಿ ಸರೋಜಿನಿ, ರಾಜಶೇಖರ ಎನ್. ಉಪಸ್ಥಿತರಿದ್ದರು.