ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 20ನೇ ಕಿನ್ನಿಗೋಳಿ ಶಾಖೆಯ ಉದ್ಘಾಟನಾ ಸಮಾರಂಭ
Saturday, August 31, 2024
ಕಿನ್ನಿಗೋಳಿ:ಗ್ರಾಮೀಣ ಭಾಗದ ಜನರಲ್ಲಿ ಆರ್ಥಿಕವಾಗಿ ಸದೃಡತೆಯನ್ನು ಮೂಡಿಸುವಲ್ಲಿ ಸಹಕಾರಿ ಕ್ಷೇತ್ರ ಪರಿಣಾಮಕಾರಿಯಾಗಲಿದೆ ಎಂದು ಶ್ರೀ ಗುರುದೇವದತ್ತ ಸಂಸ್ಥಾನಮ್, ಒಡಿಯೂರು
ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಕಿನ್ನಿಗೋಳಿಯ ದುರ್ಗಾದಯಾ ಬಿಲ್ಡಿಂಗ್ ನಲ್ಲಿ
ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 20ನೇ ಕಿನ್ನಿಗೋಳಿ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿಮಾತನಾಡಿದರು. ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕ ಸಂಸ್ಥೆಗಳು ಜನಪರವಾಗಿ ಉತ್ತಮ ಕಾರ್ಯವನ್ನು ನಡೆಸುದರ ಜೊತೆಗೆ ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಕಾರ್ಯ ಮಾಡುತ್ತಿದೆ ಎಂದರು.
ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ ಸ್ಥಳೀಯ ಕಷ್ಟಸುಖಗಳಿಗೆ ಸ್ಪಂದಿಸುವ ಕಾರ್ಯ ಶ್ಲಾಘನೀಯ.ಸಂಸ್ಥೆ ಇನ್ನಷ್ಟು ಬೆಳೆಯಲಿ ಎಂದರು.ಸಂಸ್ಥೆಯ ಅಧ್ಯಕ್ಷ ಸಹಕಾರ ರತ್ನ ಲ! ಎ ಸುರೇಶ್ ರೈ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಸಂಸ್ಥೆಯ ಮಾರ್ಗದರ್ಶಕರಾದ ಸಾಧ್ವೀ ಶ್ರೀ ಶ್ರೀ ಮಾತಾನಂದಮಯೀ , ಕಟೀಲು ದೇವಳದ ಪ್ರಧಾನ ಅರ್ಚಕ
ಕೆ.ಲಕ್ಷ್ಮೀನಾರಾಯಣ ಅಸ್ರಣ್ಣ,
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ನಿರ್ದೇಶಕರಾದ ಭಾರತಿ ಜಿ ಭಟ್, ದುರ್ಗಾದಯ ಕಟ್ಟಡ ಮಾಲಕ ಕೆ ಸೀತಾರಾಮ್ ಶೆಟ್ಟಿ , ಯುಗಪುರುಷದ ಸಂಪಾದಕ ಕೆ. ಭುವನಾಭಿರಾಮ ಉಡುಪ, ಮೂಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಹೆಗ್ಡೆ ಶ್ರೀ ಡೆವಲೆಪ್ಪರ್ಸ್ ಮಾಲಕ ಗಿರೀಶ್ ಎಮ್ ಶೆಟ್ಟಿ , ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶೈಲಾ ಸಿಕ್ಕೇರಾ,
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಇದರ ಜಿಲ್ಲಾ ಸಂಯೋಜಕ ವಿಜಯ.ಬಿ.ಎಸ್, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಯೋಜನಾ ನಿರ್ದೇಶಕರಾದ ಕಿರಣ್ ಯು, ಡಾ.ಕಿಶೋರ್ ಶೆಟ್ಟಿ ದುರ್ಗಾದಯಾ, ಮೂಲ್ಕಿ ಬಂಟರ ಸಂಘದ ಮಾಜಿ ಅಧ್ಯಕ್ಷ ಪುರುಶೋತ್ತಮ ಶೆಟ್ಟಿ ಕಿನ್ನಿಗೋಳಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲ್, ಕಿನ್ನಿಗೋಳಿ ಶಾಖಾ ವ್ಯವಸ್ಥಾಪಕರಾದ ಯಶಸ್ವಿನಿ, ಸಂಸ್ಥೆಯ ನಿರ್ದೇಶಕರು ಮತ್ತಿತರರು ಉಪಸ್ಥಿತರಿದ್ದರು.ಸಂಸ್ಥೆಯ ಉಪಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ ಸ್ವಾಗತಿಸಿ ಪ್ರಸ್ತಾವನೆಗೈದರು. ನಿರ್ದೇಶಕರಾದ ಗಣಪತಿ ಭಟ್ ಧನ್ಯವಾದ ಸಮರ್ಪಿಸಿದರು.
ಲೋಕೇಶ್ ರೈ ಕಾರ್ಯಕ್ರಮ ನಿರೂಪಿಸಿದರು