-->


ಕಿನ್ನಿಗೋಳಿ:ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುದ್ದು ಕೃಷ್ಣ ಸ್ಪರ್ಧೆ

ಕಿನ್ನಿಗೋಳಿ:ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುದ್ದು ಕೃಷ್ಣ ಸ್ಪರ್ಧೆ

ಕಿನ್ನಿಗೋಳಿ :ಕಿನ್ನಿಗೋಳಿ ಯುಗಪುರುಷ ನೇತೃತ್ವದಲ್ಲಿ ಮೆನ್ನಬೆಟ್ಟು ಭ್ರಾಮರೀ ಮಹಿಳಾ ಸಮಾಜ,ಕಿನ್ನಿಗೋಳಿ ರೋಟರಿ ಕ್ಲಬ್, ಇನ್ನರ್ ಕ್ಲಬ್, ಲಯನ್ಸ್ ಕ್ಲಬ್, ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ, ವಿಜಯ ಕಲಾವಿದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುದ್ದು ಕೃಷ್ಣ ಸ್ಪರ್ಧೆ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ನಡೆಯಿತು.ಕಿನ್ನಿಗೋಳಿ  ಯುಗಪುರುಷ ದ  ಭುವನಾಭಿರಾಮ ಉಡುಪ ಅವರು  ದೀಪ ಬೆಳಗಿಸಿ ಸ್ಪರ್ಧೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಓರಿಯಂಟಲ್ ಇನ್ಸೂರೆನ್ಸ್ ಸಂಸ್ಥೆಯ ಯಾದವ ದೇವಾಡಿಗ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕಿನ್ನಿಗೋಳಿ ರೋಟರಿ ಕ್ಲಬ್‌ ಅಧ್ಯಕ್ಷ ಧನಂಜಯ ಶೆಟ್ಟಿಗಾ‌ರ್, ಲಯನ್ಸ್ ಕ್ಲಬ್ ಅಧ್ಯಕ್ಷ ಸುಧಾಕರ ಶೆಟ್ಟಿ, ಭ್ರಾಮರೀ ಮಹಿಳಾ ಸಮಾಜದ ಅಧ್ಯಕ್ಷೆ ಮೀರಾ ಶೆಟ್ಟಿ, ಯಕ್ಷಲಹರಿಯ ಅಧ್ಯಕ್ಷ ರಘುನಾಥ ಕಾಮತ್ ಕೆಂಚನೆಕೆರೆ, ವಿಶ್ವ ಬ್ರಾಹ್ಮಣ ಸಮಾಜದ ಅಧ್ಯಕ್ಷ ಜಗದೀಶ್ ಆಚಾರ್ಯ, ಇನ್ನ‌ರ್ ವೀಲ್ ಕ್ಲಬ್ ಅಧ್ಯಕ್ಷೆ ಸವಿತಾ,ವಿಜಯ ಕಲಾವಿದರು ಸಂಘದ ಅಧ್ಯಕ್ಷ ಶರತ್ ಶೆಟ್ಟಿ, ತೀರ್ಪುಗಾರರಾದ ಪ್ರೇಮಾ ಭಟ್, ಅಭಿಷೇಕ್ ಶೆಟ್ಟಿ ಐಕಳ, ಬಬಿತಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅನೂಷ ಕರ್ಕೇರಾ ಸ್ವಾಗತಿಸಿ ರಘುನಾಥ ಕಾಮತ್ ನಿರೂಪಿಸಿ ವಂದಿಸಿದರು. ಬಳಿಕ ಮುದ್ದು ಕೃಷ್ಣವೇಷ ಸ್ಪರ್ಧೆ ನಡೆಯಿತು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article