-->


ಆ.20- ಮೂಲ್ಕಿ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದ ರುಕ್ಕರಾಮ್ ಸಾಲ್ಯಾನ್ ಸಭಾಗೃಹ ಲೋಕಾರ್ಪಣೆ

ಆ.20- ಮೂಲ್ಕಿ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದ ರುಕ್ಕರಾಮ್ ಸಾಲ್ಯಾನ್ ಸಭಾಗೃಹ ಲೋಕಾರ್ಪಣೆ

ಮುಲ್ಕಿ:ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪ್ರತಿಷ್ಠಿತ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜನ್ಮದಿನಾಚರಣೆ, ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ, ರುಕ್ಕರಾಮ ಸಾಲ್ಯಾನ್  ಸಭಾಗೃಹ ಲೋಕಾರ್ಪಣೆ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಆಗಸ್ಟ್ 19 ರಿಂದ 20ರ ವರೆಗೆ ನಡೆಯಲಿದೆ ಎಂದು ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಕಟ್ಟಡ ಸಮಿತಿಯ ಕಾರ್ಯದರ್ಶಿ ಚಂದ್ರಶೇಖರ ಸುವರ್ಣ ಹೇಳಿದರು 
ಅವರು ಮುಲ್ಕಿ ಬಿಲ್ಲದ ಸಮಾಜ ಸೇವಾ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು
ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ನರೇಂದ್ರ ಕೆರೆಕಾಡು ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನೋತ್ಸವದ ಅಂಗವಾಗಿ ಆಗಸ್ಟ್ 19 ಸೋಮವಾರ ಬೆಳಿಗ್ಗೆ 6.45ಕ್ಕೆ ಭಜನಾ ಜ್ಯೋತಿ ಉದ್ಘಾಟನೆ, ಬಳಿಕ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ , ರಾತ್ರಿ 8:00 ಗಂಟೆಗೆ ಭಜನಾ ಮಂಗಲೋತ್ಸವ ನಡೆಯಲಿದೆ
ಅಗಸ್ಟ್ 20ರಂದು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ರುಕ್ಕರಾಮ ಸಾಲ್ಯಾನ್  ಸಭಾಗೃಹ ಲೋಕಾರ್ಪಣೆ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಡೆಯಲಿದೆ
ಸಮುದಾಯ ಭವನದ ಲೋಕಾರ್ಪಣೆಯನ್ನು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ನೆರವೇರಿಸಲಿದ್ದಾರೆ ರಾಜ್ಯ ಆರೋಗ್ಯ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಶ್ರೀ ರುಕ್ಕರಾಮ ಸಾಲ್ಯಾನ್ ಸಭಾಗೃಹ ವನ್ನು ಉದ್ಘಾಟಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಸಂಸದರಾದ ಕ್ಯಾ. ಬೃಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ ವಹಿಸಲಿದ್ದಾರೆ. 
ವಿದ್ಯಾರ್ಥಿವೇತನ ವಿತರಣೆಯನ್ನು ಶಾಸಕ ಉಮಾನಾಥ ಕೋಟ್ಯಾನ್, ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನವನ್ನು ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್, ಎನ್ ಆರ್ ಮುಲ್ಕಿ ಸ್ಮರಣಾರ್ಥ ವಿದ್ಯಾರ್ಥಿ ವೇತನವನ್ನು ಅಶೋಕ್ ಟೈಲರ್ ಮಾಲಕ ಶಶಿಧರ್ ಕೋಟ್ಯಾನ್ ವಿತರಿಸಲಿದ್ದಾರೆ 
ಶ್ರೀ ಕ್ಷೇತ್ರ ಗೆಜ್ಜೆಗಿರಿಯ ತಂತ್ರಿಗಳಾದ ಶಿವಾನಂದ ಶಾಂತಿ, ಶುಭಾಶಂಸನೆಗೈಯಲ್ಲಿದ್ದಾರೆ 
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಬೋಜೇಗೌಡ, ಐವಾನ್ ಡಿಸೋಜಾ, ಮಂಜುನಾಥ ಭಂಡಾರಿ,ಮಾಜೀ ಸಚಿವ ಅಭಯ ಚಂದ್ರ ಜೈನ್, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ,ಮುಲ್ಕಿ ನಗರ ಪಂಚಾಯಿತಿ ಮುಖ್ಯಾಧಿಕಾರಿ ಇಂದು.ಎಂ., ಮುಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ್ ಕೋಟ್ಯಾನ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಮುಂಬೈ ಭಾರತ್ ಕೋಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ ಮತ್ತಿತರರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕಟ್ಟಡ ಸಮಿತಿಗೆ ಅಧ್ಯಕ್ಷರಾಗಿದ್ದು ಇತ್ತೀಚೆಗೆ ನಿಧನ ಹೊಂದಿದ ವಿಠಲ ಅಮೀನ್ ರವರಿಗೆ ಮರಣೋತ್ತರವಾಗಿ ಬಿಲ್ಲವರತ್ನ ಪ್ರಶಸ್ತಿ ನೀಡಲಾಗುವುದು ಎಂದು ಅವರು ಹೇಳಿದರು 
ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷೆ ಸರೋಜಿನಿ ಸುವರ್ಣ ,ಗೌರವ ಪ್ರಧಾನ ಕಾರ್ಯದರ್ಶಿ, ಜಯಕುಮಾರ್ ಕುಬೆವೂರು ಕೋಶಾಧಿಕಾರಿ ಕಮಲಾಕ್ಷ ಬಡಗುಹಿತ್ಲು,ದಳಪತಿ ಶಂಕರ ಪಡು ಬೈಲು, ಮಹಿಳಾ ಮಂಡಳಿ ಅಧ್ಯಕ್ಷೆ ಶಶಿಕಲಾ ಅಮೀನ್ ಮತ್ತಿತರರು ಉಪಸ್ಥಿತರಿದ್ದರು
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article