ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮತ್ತು ಬಾಲಕಿಯರ ಕೋ ಕೋ ಪಂದ್ಯಾಟ, ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರು ಇಲ್ಲಿನ ಬಾಲಕಿಯರ ತಂಡ ಪ್ರಥಮ ಸ್ಥಾನ
Sunday, August 18, 2024
ಬಜಪೆ:ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮತ್ತು ಬಾಲಕಿಯರ ಕೋ ಕೋ ಪಂದ್ಯಾಟವು ಸರಕಾರಿ ಪದವಿ ಪೂರ್ವ ಕಾಲೇಜು ಕಾರ್ನಾಡು ಮುಲ್ಕಿ ಯಲ್ಲಿ ನಡೆಯಿತು. ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರು ಇಲ್ಲಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಹಾಗೂ ಹೋಲಿ ಫ್ಯಾಮಿಲಿ ಪ್ರೌಢಶಾಲೆ ಬಜ್ಪೆ ತಂಡವು ದ್ವಿತೀಯ ಸ್ಥಾನವನ್ನು ಪಡೆಯಿತು. ಬಾಲಕರ ವಿಭಾಗದಲ್ಲಿ ಕೆ ಪಿ ಎಸ್ ಪಂಜಿನಡ್ಕ ಪ್ರಥಮ ಸ್ಥಾನ ಹಾಗೂ ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರು ದ್ವಿತೀಯ ಸ್ಥಾನವನ್ನು ಪಡೆಯಿತು.