ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ರಕ್ಷಾ ಬಂಧನ ಕಾರ್ಯಕ್ರಮ
Monday, August 19, 2024
ಮೂಲ್ಕಿ:ಶ್ರಾವಣ ಪೂರ್ಣಿಮೆಯ ಅಂಗವಾಗಿ ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಸೊಂದ ಭಾಸ್ಕರ್ ಭಟ್ ರಕ್ಷಾಬಂಧನ ದಿನದ ಮಹತ್ವವನ್ನು ತಿಳಿಸಿದರು, ಸಚಿನ್ ಹೊಸಕಾಡು, ಶಾಲಾ ಪ್ರಾಂಶುಪಾಲ ಜಿತೇಂದ್ರ ವಿ ರಾವ್, ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.