
ಮುಲ್ಕಿ: ಕಾರ್ನಾಡ್ ಬಳಿ ಮಣ್ಣು ಸಾಗಾಟ; ರಸ್ತೆ ಕೆಸರುಮಯ ಸಂಚಾರ ದುಸ್ತರ
Tuesday, August 27, 2024
ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡ್ ಗೇರು ಕಟ್ಟೆಯಿಂದ ಜೂನಿಯರ್ ಕಾಲೇಜ್ ಮೂಲಕ ವೆಂಕಟರಮಣ ದೇವಸ್ಥಾನ ಸಂಪರ್ಕ ರಸ್ತೆ ಬದಿಯಲ್ಲಿ ಸೈಟ್ ಒಂದರಿಂದ ನಿಯಮಗಳನ್ನು ಗಾಳಿಗೆ ತೂರಿ ಟಿಪ್ಪರ್ ನಲ್ಲಿ ಮಣ್ಣು ಸಾಗಾಟ ಎಗ್ಗಿಲ್ಲದೆ ನಡೆಯುತ್ತಿದ್ದು ರಸ್ತೆ ಕೆಸರುಮಯವಾಗಿ ಸಂಚಾರ ದುಸ್ತರವಾಗಿ ಪರಿಣಮಿಸಿದೆ.
ಈ ಬಗ್ಗೆ ಅನೇಕ ಬಾರಿ ಮುಲ್ಕಿ ನಗರ ಪಂಚಾಯಿತಿಗೆ, ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದರೂ ಮಣ್ಣು ಸಾಗಾಟ ನಿರಂತರವಾಗಿ ನಡೆಯುತ್ತಿದೆ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಗ್ಗಿಲ್ಲದೆ ನಿಯಮಗಳನ್ನು ಗಾಳಿಗೆ ತೂರಿ ಟಿಪ್ಪರ್ ಮೂಲಕ ಮಣ್ಣು ಸಾಗಾಟದಿಂದ ರಸ್ತೆ ಕೆಸರುಮಯವಾಗಿ ಅನೇಕ ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಬಿದ್ದು ಗಾಯಗೊಂಡ ಘಟನೆಯೂ ನಡೆದಿದೆ.
ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್ ಮಾತನಾಡಿ ಮಣ್ಣು ಸಾಗಾಟದಿಂದ ತೊಂದರೆಯಾಗಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದಿದ್ದು ಕೆಸರುಮಯವಾದ ರಸ್ತೆ ಸರಿಪಡಿಸಿ ಕೊಡುವಂತೆ ಮಣ್ಣು ಸಾಗಾಟ ನಡೆಸುತ್ತಿರುವ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ
ಸ್ಥಳಕ್ಕೆ ಮುಲ್ಕಿ ನಗರ ಪಂಚಾಯತ್ ಸದಸ್ಯ ಪುತ್ತು ಬಾವ, ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಮಣ್ಣು ಸಾಗಾಟದ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದಾರೆ.