-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಶಿಕ್ಷಣಕ್ಕೆ ಸಹಾಯ ಹಸ್ತ ಹಾಗೂ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ಕಾರ್ಯ ಅಭಿನಂದನೀಯ -ಡಾ.ಪದ್ಮನಾಭ ವಿ ಶೆಟ್ಟಿ

ಶಿಕ್ಷಣಕ್ಕೆ ಸಹಾಯ ಹಸ್ತ ಹಾಗೂ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ಕಾರ್ಯ ಅಭಿನಂದನೀಯ -ಡಾ.ಪದ್ಮನಾಭ ವಿ ಶೆಟ್ಟಿ

ಮುಲ್ಕಿ: ಶಿಮಂತೂರು ಶ್ರೀ ಆದಿ ಜನಾರ್ದನ ವಿದ್ಯಾನಿಧಿ ವತಿಯಿಂದ ಬಡ ಮಕ್ಕಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. 
ಕಾರ್ಯಕ್ರಮವನ್ನು ಉದ್ಘಾಟಿಸಿ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಕಾರ್ಯಾಧ್ಯಕ್ಷ ಡಾ ಪದ್ಮನಾಭ ವಿ. ಶೆಟ್ಟಿ ಮಾತನಾಡಿ ದಾನಗಳಲ್ಲಿ ಶ್ರೇಷ್ಠ ದಾನ ವಿದ್ಯಾದಾನವಾಗಿದ್ದು ಶಿಕ್ಷಣಕ್ಕೆ ಸಹಾಯ ಹಸ್ತ ಹಾಗೂ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ಕಾರ್ಯ ಅಭಿನಂದನೀಯ ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ ವಹಿಸಿ ಮಾತನಾಡಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯದ ಜೊತೆಗೆ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ವಿದ್ಯಾನಿಧಿಗೆ ಚಾಲನೆ ನೀಡಲಾಗಿದ್ದು ದಾನಿಗಳಿಂದ ಉತ್ತಮ ಬೆಂಬಲ ದೊರಕಿದ್ದು ನಿರಂತರವಾಗಿ ನಡೆಯಲಿದೆ ಎಂದರು 
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಬಪ್ಪನಾಡು ಕ್ಷೇತ್ರದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಮುಂಬೈ ಉದ್ಯಮಿಗಳಾದ ರವಿ ಶೆಟ್ಟಿ,ಸುಂದರ ಶೆಟ್ಟಿ, ಸತೀಶ್ ಶೆಟ್ಟಿ ಕೆಂಚನಕೆರೆ,ಕ್ಷೇತ್ರದ ಆಡಳಿತಾಧಿಕಾರಿ ಇಂದು ಎಂ, ಶ್ರೀಪತಿ ಭಟ್ ಪರೆಂಕಿಲ, ಮೋಹನ್ ಕೋಟ್ಯಾನ್, ಹರೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಮೋಹನ್ ಕೋಟ್ಯಾನ್ ಸ್ವಾಗತಿಸಿ ನಿರೂಪಿಸಿದರು.
ಸುಮಾರು 45ಕ್ಕೂ ಹೆಚ್ಚು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ನೀಡಲಾಯಿತು..
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ