ಬಡಗ ಎಕ್ಕಾರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಡಿಸಿಸಿ ಕ್ಲಬ್ ನಿಂದ ಐಡಿ ಕಾರ್ಡ್ ವಿತರಣೆ
Friday, September 20, 2024
ಬಜಪೆ:ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ದಾಖಲಾದಂತಹ ಸುಮಾರು 60 ವಿದ್ಯಾರ್ಥಿಗಳಿಗೆ ಡಿಸಿಸಿ ಕ್ಲಬ್ ಎಕ್ಕಾರು ಇವರ ವತಿಯಿಂದ ಐಡಿ ಕಾರ್ಡನ್ನು ವಿತರಿಸಲಾಯಿತು. ಡಿಸಿಸಿ ಕ್ಲಬ್ ನ ಅಧ್ಯಕ್ಷ ಪ್ರಶಾಂತ್ ಆಚಾರ್ಯ ವಿದ್ಯಾರ್ಥಿಗಳಿಗೆ ಐಡಿ ಕಾರ್ಡನ್ನು ವಿತರಿಸಿದರು. ಕಳೆದ ಹಲವು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಐಡಿ ಕಾರ್ಡನ್ನು ವಿತರಿಸಿ ಸರಕಾರಿ ಶಾಲೆಯ ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾತಾವರಣವನ್ನು ಒದಗಿಸುವಲ್ಲಿ ಡಿಸಿಸಿ ಕ್ಲಬ್ ಎಕ್ಕಾರು ಶ್ರಮಿಸಿದೆ.ಕ್ಲಬ್ ನ ಕಾರ್ಯಕ್ಕೆ ಬಡಗ ಎಕ್ಕಾರು ಸರಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಎಚ್ಎಂ ಇವರು ಸಂಸ್ಥೆಯ ಪರವಾಗಿ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಸುದೀಪ್ ಎಸ್ ಅಮೀನ್, ಶಿಕ್ಷಕಿಯರಾದ ಶ್ರೀಮತಿ ವಿದ್ಯಾಲತಾ, ಶ್ರೀಮತಿ ರಮ್ಯಾ, ಶ್ರೀಮತಿ ವಿದ್ಯಾ ಗೌರಿ, ಶ್ರೀಮತಿ ವಿನ್ನಿ ನಿರ್ಮಲ ಡಿಸೋಜ, ಜಯಂತಿ ಡಾ.ಅನಿತ್ ಕುಮಾರ್ ಉಪಸ್ಥಿತರಿದ್ದರು. ಶ್ರೀಮತಿ ಚಿತ್ರಶ್ರೀ ಕೆ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು.