-->
ದ.ಕ.ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಅಪಘಾತ ವಿಮಾ ಯೋಜನೆಯ ನೋಂದಣಿ

ದ.ಕ.ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಅಪಘಾತ ವಿಮಾ ಯೋಜನೆಯ ನೋಂದಣಿ



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ
ಪತ್ರಕರ್ತರ ಸಂಘದ ಸದಸ್ಯರಿಗೆ ಪತ್ರಕರ್ತರ ಕ್ಷೇಮಾಭಿವೃದ್ಧಿ ಯೋಜನೆಯಿಂದ ಅಂಚೆ ಅಪಘಾತ ವಿಮಾ ಯೋಜನೆಯ ನೋಂದಣಿ ಅಭಿಯಾನಕ್ಕೆ ಭಾನುವಾರ ಮಂಗಳೂರು ಪತ್ರಿಕಾ ಭವನದಲ್ಲಿ ಚಾಲನೆ ನೀಡಲಾಯಿತು. ಭಾರತೀಯ ಅಂಚೆ ಇಲಾಖೆಯ ಮಂಗಳೂರು ಅಂಚೆ ವಿಭಾಗದ
ಹಿರಿಯ ಅಂಚೆ ಅಧೀಕ್ಷಕ ಸುಧಾಕರ ಮಲ್ಯ ಉದ್ಘಾಟಿಸಿದರು‌.
ಅಂಚೆ ಅಪಘಾತ ವಿಮಾ ಯೋಜನೆ ದೇಶದ ಅತ್ಯುತ್ತಮ ಸರಳವಾದ ಜನಸಾಮಾನ್ಯರ ಕೈಗೆಟುಕುವ ವಿಮಾ ಯೋಜನೆಯಾಗಿದೆ ಎಂದು ಅವರು ಹೇಳಿದರು‌. 10 ಮತ್ತು 15ಲಕ್ಷ ರೂಪಾಯಿ ಮೊತ್ದ ಅಪಘಾತ ವಿಮಾಯೋಜನೆಗೆ ಕ್ರಮವಾಗಿ ರೂ. 549,ರೂ.749 ವಿಮಾ ಕಂತು ಪಾವತಿಸಿದ ಬಳಿಕ ಯಾವುದೇ ಅಂಚೆ ಕಚೇರಿಯ ಮೂಲಕ ದಾಖಲೆ ಸಲ್ಲಿಸಿ ಸಣ್ಣ ಪುಟ್ಟ ಅಪಘಾತ ಸಂಭವಿಸಿದಾಗ ನಿರ್ದಿಷ್ಟ ವಿಮಾ ಪರಿಹಾರ ಮೊತ್ತ ಪಡೆಯಬಹುದು. ಶಾಶ್ವತ ಅಂಗ ವೈಕಲ್ಯದ ಸಂದರ್ಭದಲ್ಲಿ ಮತ್ತು ಮರಣ ಸಂದರ್ಭದಲ್ಲಿ ಪೂರ್ಣ ಪ್ರಮಾಣದ ವಿಮಾ ಮೊತ್ತ ಪಡೆಯಬಹುದು ಎಂದು ಸುಧಾಕರ ಮಲ್ಯ ವಿವರಿಸಿದರು.

ಜಿಲ್ಲೆಯ ಪತ್ರಕರ್ತರ ಸಂಘದ ಸದಸ್ಯರಿಗೆ ವಿಮಾ ನೋಂದಾವಣೆ ಉಚಿತ ವಾಗಿದೆ.ಪ್ರತಿಯೊಬ್ಬರ ವಿಮಾ ವಾರ್ಷಿಕ ಪಾಲಿಸಿ ರೂ.549 ವೆಚ್ಚವನ್ನು ಪತ್ರಕರ್ತರ ಕ್ಷೇಮಾಭಿವೃದ್ಧಿ ಯೋಜನೆ ಯಿಂದ (ಒಂದು ವರ್ಷಕ್ಕೆ ) ಪಾವತಿಸ ಲಾಗುತ್ತಿದೆ ಎಂದು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾಹಿತಿ ನೀಡಿದ್ದಾರೆ.

ಸಮಾರಂಭದಲ್ಲಿ ಇಂಡಿಯನ್ ಪೋಸ್ಟಲ್ ಬ್ಯಾಂಕ್ ಮಂಗಳೂರು ಇದರ ವ್ಯವಸ್ಥಾಪಕರಾದ ಶಿಯಾಝ್ ಬಿ, ಭಾರತೀಯ ಅಂಚೆ ಇಲಾಖೆಯ ಮಂಗಳೂರು ಪ್ರಧಾನ ಅಂಚೆ ಕಚೇರಿಯ ಅಸಿಸ್ಟೆಂಟ್ ಪೋಸ್ಟ್ ಮಾಸ್ಟರ್, ಎಚ್ .ಆರ್. ಚಂದ್ರಶೇಖರ್, ಹಿರಿಯ ಪತ್ರಕರ್ತ ಆನಂದ ಶೆಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಮಾಜಿ ಅಧ್ಯಕ್ಷ ಅನ್ನು ಮಂಗಳೂರು
ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಕಾರ್ಯಕಾರಿ ಸಮಿತಿ ಸದಸ್ಯ ಆರಿಫ್ ಪಡುಬಿದ್ರೆ,ಸಂದೇಶ್ ಜಾರ,ಸತೀಶ್ ಇರಾ, ಮೊದಲಾದವರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು.ಪ್ರದಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

Ads on article

Advertise in articles 1

advertising articles 2

Advertise under the article