
ಕಿನ್ನಿಗೋಳಿ: ಕ್ಷೇತ್ರ ಧರ್ಮಸ್ಥಳಗ್ರಾಮಾಭಿವೃದ್ದಿ ಯೋಜನೆ ಬಿ. ಸಿ. ಟ್ರಸ್ಟ್ (ರಿ ) ಬಜಪೆ,ಕಿನ್ನಿಗೋಳಿ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿಯು ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ನಡೆಯಿತು.ತರಬೇತಿ ಕಾರ್ಯಕ್ರಮವನ್ನು ಕಿನ್ನಿಗೋಳಿ ಯುಗಪುರುಷದ ಪ್ರಧಾನ ಸಂಪಾದಕರೂ,ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಭುವನಾಭಿರಾಮ ಉಡುಪ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷೆ ಶ್ರೀಮತಿ ಹರೀನಾಕ್ಷಿ , ಕಟೀಲು ದುರ್ಗಾಪರಮೇಶ್ವರಿ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕ ಸಾಯಿನಾಥ್ ಶೆಟ್ಟಿ ,ಪ್ರಾದೇಶಿಕ ಕಚೇರಿಯ ಯೋಜನಾಧಿಕಾರಿಗಳಾದ ಅಮರ್ ಪ್ರಸಾದ್, ಶ್ರೀಮತಿ ರೂಪ ಜೈನ್ , ಜಿಲ್ಲಾ ಕಚೇರಿಯ ಅಧಿಕಾರಿ ಪ್ರೇಮನಾಥ್, ವಲಯದ ಎಲ್ಲಾ ಒಕ್ಕೂಟಗಳ ಪದಾಧಿಕಾರಿಗಳು, ಉಪಸ್ಥಿತರಿದ್ದರು.

ಸೇವಾಪ್ರತಿನಿಧಿ ಮಮತಾ ನಾಗೇಶ್ ಸ್ವಾಗತಿಸಿದರು. ಕಮಲಾ ನಾಗೇಶ್ ವಂದಿಸಿದರು.ವಲಯದ ಮೇಲ್ವಿಚಾರಕಿ ಶ್ರೀಮತಿ ಶಾಂತಿ ಕಾರ್ಯಕ್ರಮ ನಿರೂಪಿಸಿದರು.
