ದೈಹಿಕ ಶಿಕ್ಷಣ ಶಿಕ್ಷಕಿ ವಿದ್ಯಾಲತಾಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ
Wednesday, September 4, 2024
ಬಜಪೆ: ಬಡಗ ಎಕ್ಕಾರು ಸರಕಾರಿ ಪ್ರೌಢಶಾಲೆ ಇಲ್ಲಿ 16 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವಿದ್ಯಾಲತಾ ಅವರು 2024ನೇ ಸಾಲಿನ ದ.ಕ. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ಅವರ ತರಬೇತಿಯೊಂದಿಗೆ ಶಾಲಾ ಬಾಲಕಿಯರ ತಂಡ ಖೋಖೋ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನ ಹಾಗೂ 4×100 ಮೀ. ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದಿತ್ತು. ಈ ಹಿಂದೆ ಶಾಲಾ ವಿದ್ಯಾರ್ಥಿಗಳು ಹೋಬಳಿ, ತಾಲೂಕು, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಶಾಲೆಯನ್ನು ಇವರ ತರಬೇತಿಯೊಂದಿಗೆ ಪ್ರತಿನಿಧಿಸಿದ್ದರು. ವಿಜ್ಞಾನ ನಾಟಕ, ವಿಜ್ಞಾನ ಮಾದರಿ ಸ್ಪರ್ಧೆ, ಯೋಗ, ಧ್ಯಾನ, ಕರಾಟೆಗಳ ಬಗ್ಗೆಯೂ ವಿದ್ಯಾರ್ಥಿಗಳನ್ನು ತರಬೇತಿಗೊಳಿಸುತ್ತಾರೆ. 2019-20ರಲ್ಲಿ ಐಸಿಟಿ ತರಬೇತಿ ಪಡೆದು ಉತ್ತಮ ಸಂಪನ್ಮೂಲ ಶಿಕ್ಷಕಿಯಾಗಿ ಕಾರ್ಯಾಗಾರಗಳನ್ನು ನಿರ್ವಹಿಸುತ್ತಿದ್ದಾರೆ.