-->


 ಕಿಲೆಂಜಾರು ಅರಮನೆ ಸರಕಾರಿ ಪ್ರೌಢಶಾಲೆಯಲ್ಲಿ ಗಾಂಧೀಜಯಂತಿ ಆಚರಣೆ

ಕಿಲೆಂಜಾರು ಅರಮನೆ ಸರಕಾರಿ ಪ್ರೌಢಶಾಲೆಯಲ್ಲಿ ಗಾಂಧೀಜಯಂತಿ ಆಚರಣೆ

 

ಬಜಪೆ:ಕುಪ್ಪೆಪದವು ಸಮೀಪದ ಕಿಲೆಂಜಾರು ಅರಮನೆ ಸರಕಾರಿ ಪ್ರೌಢಶಾಲೆಯಲ್ಲಿ ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಯವರ ಜಯಂತಿಯನ್ನು ಆಚರಿಸಲಾಯಿತು.ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಈ ಸಂದರ್ಭ ಪುಷ್ಪ ನಮನವನ್ನು ಸಲ್ಲಿಸಲಾಯಿತು.ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಜೊತೆಗೂಡಿ ಶಾಲಾ ಆವರಣ ಹಾಗೂ ಸುತ್ತಮುತ್ತ ಸ್ವಚ್ಚತಾ ಕಾರ್ಯವನ್ನು ಮಾಡಿದರು.ಅಲ್ಲದೆ ಗಿಡ ನೆಡುವುದರ ಮೂಲಕ ಪರಿಸರ ಸಂರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.

ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಯರು,ಎಸ್ ಡಿ ಎಂಸಿ ಅಧ್ಯಕ್ಷರು,ಸದಸ್ಯರುಗಳು,ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article