ಅ. 9 ಮೂಲ್ಕಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ
Friday, October 4, 2024
ಮೂಲ್ಕಿ : ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರೊಂದಿಗೆ ಅಕ್ಟೋಬರ್ 9 ರಂದು ಬೆಳಿಗ್ಗೆ 10 ಗಂಟೆಯಿಂದ ಮೂಲ್ಕಿ ಪಟ್ಟಣ ಪಂಚಾಯಿತಿ ಹತ್ತಿರದ ಬಂಟರ ಭವನದಲ್ಲಿ "ಲೋಕಾಯುಕ್ತ ಜನ ಸಂಪರ್ಕ ಸಭೆ" ಯನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ಪಡೆದುಕೊಂಡು ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.