ಮುಲ್ಕಿ: ನಾದಸ್ವರ ವಾದಕ ನಾಗೇಶ್ ಬಪ್ಪನಾಡು ರವರಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿ ಅಭಿನಂದನೆ
Friday, October 25, 2024
ಮುಲ್ಕಿ: ಖ್ಯಾತ ನಾದಸ್ವರ ವಾದಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ವಿದ್ವಾನ್ ನಾಗೇಶ್ ಬಪ್ಪನಾಡು ರವರಿಗೆ ಆಕಾಶವಾಣಿ ನವದೆಹಲಿ ಉನ್ನತ ಶ್ರೇಣಿಯ ಕಲಾವಿದ (ಟಾಪ್ ಗ್ರೇಡ್) ಮಾನ್ಯತೆ ನೀಡಿರುವುದನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಸ್ವಾಗತಿಸಿದ್ದು ಅವರನ್ನು ಅಭಿನಂದಿಸಿದ್ದಾರೆ
ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಮಾತನಾಡಿ ಕಳೆದ ಹಲವಾರು ವರ್ಷಗಳಿಂದ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಾದಸ್ವರದ ಮೂಲಕ ಕಲೆಯನ್ನು ಆರಾಧಿಸಿಕೊಂಡು ಬರುತ್ತಿದ್ದು ಜನಮನ್ನಣೆ ಗಳಿಸಿದ್ದಾರೆ
ಅವರ ಕಲೆಯ ಆರಾಧನೆ ನಿರಂತರವಾಗಿ ನಡೆದು ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ಪ್ರಶಸ್ತಿಗಳು ಲಭಿಸಲಿ ಎಂದು ಹಾರೈಸಿದ್ದಾರೆ.
ನಾದಸ್ವರ ವಾದಕ ನಾಗೇಶ್ ಬಪ್ಪನಾಡು ರವರನ್ನು ಮುಲ್ಕಿ ಸೀಮೆ ಅರಸರು ಹಾಗೂ ಶ್ರೀ ಬಪ್ಪನಾಡು ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ,
ಕಸಾಪ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಕಾರ್ನಾಡ್ ಹರಿಹರ ಕ್ಷೇತ್ರದ ಆಡಳಿತ ಮೊಕ್ತೇಸರ ಅರವಿಂದ ಪೂಂಜಾ,ಮಾಜೀ ಧಾರ್ಮಿಕ ಪರಿಷತ್ ಸದಸ್ಯ ಗಿರಿ ಪ್ರಕಾಶ್ ತಂತ್ರಿ ಪೊಳಲಿ,ಮುಲ್ಕಿ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಅತುಲ್ ಕುಡ್ವ,
ಗೋಪಾಲಕೃಷ್ಣ ಭಟ್ ಬಪ್ಪನಾಡು, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ,ಮುಲ್ಕಿ ನ ಪಂ ಅಧ್ಯಕ್ಷ ಸತೀಶ್ ಅಂಚನ್, ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಸದಸ್ಯರಾದ ಪುತ್ತು ಬಾವ ,ಬಾಲಚಂದ್ರ ಕಾಮತ್, ಹರ್ಷರಾಜ ಶೆಟ್ಟಿ, ಸುಭಾಷ್ ಶೆಟ್ಟಿ, ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪಯರ್ ನ ಸ್ಥಾಪಕ ಅಧ್ಯಕ್ಷ ವೆಂಕಟೇಶ ಹೆಬ್ಬಾರ್,ಡಾ. ಹರಿಶ್ಚಂದ್ರ ಪಿ ಸಾಲ್ಯಾನ್,ಉದ್ಯಮಿ ವಾಸು ಪೂಜಾರಿ ಚಿತ್ರಾಪು, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ರಂಗ ಕರ್ಮಿ ಚಂದ್ರಶೇಖರ ಸುವರ್ಣ ಮುಲ್ಕಿ, ಲ.ಕಿಶೋರ್ ಶೆಟ್ಟಿ ಬಪ್ಪನಾಡು,ಶಿವಶಂಕರ್ ವರ್ಮ, ಉದಯಕುಮಾರ್ ಶೆಟ್ಟಿ ಅಧಿಧನ್ ಮುಲ್ಕಿ,,ದರ್ಮಾನಂದ ಶೆಟ್ಟಿಗಾರ್ ಮತ್ತಿತರರು ಅಭಿನಂದಿಸಿದ್ದಾರೆ.
ಮೊದಲ ಬಾರಿಗೆ ನಾದಸ್ವರ ಕಲಾವಿದರಿಗೆ ಈ ಮಾನ್ಯತೆ ಲಭಿಸಿದೆ. ತಂದೆ ಅಣ್ಣು ಶೇರಿಗಾರ ಮತ್ತು ಸುಪ್ರಸಿದ್ಧ ನಾದಸ್ವರ ವಾದಕ ಕಿವುಳೂರು ಎನ್.ಜಿ ಗಣೇಶನ್ ಅವರಿಂದ ನಾದಸ್ವರ ಶಿಕ್ಷಣ ಪಡೆದಿರುವ ನಾಗೇಶ್ ಅವರಿಗೆ ಕರ್ನಾಟಕ ರಾಜ್ಯೋತ್ಸವ, ತಮಿಳುನಾಡು ಮುಖ್ಯಮಂತ್ರಿ ಯವರಿಂದ ನಾದಸ್ವರ ಸೆಲ್ವಂ ಮುಂತಾದ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳು ಸಂದಿವೆ