-->


ಸುರತ್ಕಲ್ : ನ.1 ರಂದು "ಯಕ್ಷಸಿರಿ" ಯಕ್ಷಗಾನ ತರಬೇತಿ ಕೇಂದ್ರದ ದ್ವೀತೀಯ ವಾರ್ಷಿಕೋತ್ಸವ

ಸುರತ್ಕಲ್ : ನ.1 ರಂದು "ಯಕ್ಷಸಿರಿ" ಯಕ್ಷಗಾನ ತರಬೇತಿ ಕೇಂದ್ರದ ದ್ವೀತೀಯ ವಾರ್ಷಿಕೋತ್ಸವ

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ "ಯಕ್ಷಸಿರಿ" ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭ ನವಂಬರ್ 1 ರಂದು ಶುಕ್ರವಾರ ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಯಕ್ಷಸಿರಿಯ ವಿದ್ಯಾರ್ಥಿಗಳ ಮತ್ತು ಇತರ ಕಲಾವಿದರ ಕೂಡುವಿಕೆಯಿಂದ ರಾಕೇಶ್ ರೈ ಅಡ್ಕ ಅವರ ನಿರ್ದೇಶನದಲ್ಲಿ "ಕೃಷ್ಣಂ ವಂದೇ ಜಗದ್ಗುರು" ಯಕ್ಷಗಾನ ಬಯಲಾಟ ಪ್ರದರ್ಶನವಾಗಲಿದೆ.
ಸಭಾ ಕಾರ್ಯಕ್ರಮ ಸಂಜೆ 7 ಗಂಟೆಗೆ ನಡೆಯಲಿದೆ. ಕಾರ್ಯಕ್ರಮವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುರತ್ಕಲ್ ಶ್ರೀ ಶಾರದಾ ಸೇವಾ ಟ್ರಸ್ಟ್ ನ ಅಧ್ಯಕ್ಷ ವೈ ರಾಘವೇಂದ್ರ ರಾವ್, ಶ್ರೀ ಡೆವಲಪರ್ಸ್ ಸಂಸ್ಥೆಯ ಅಧ್ಯಕ್ಷ ಗಿರೀಶ್ ಎಂ ಶೆಟ್ಟಿ ಕಟೀಲು, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ ಶೆಟ್ಟಿ ಸುರತ್ಕಲ್, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ (ರಿ) ನ  ಕೋಶಾಧಿಕಾರಿ ನರಸಿಂಹ ಸುವರ್ಣ, ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಟ್ರಸ್ಟಿ ಧನಂಜಯ ಶೆಟ್ಟಿ ಕಟ್ಲ, ಎಚ್ ಪಿಸಿಎಲ್ ಸಂಸ್ಥೆಯ ಮಾನವ ಸಂಪನ್ಮೂಲ ಸಹಾಯಕರಾದ ವಾಸು ನಾಯ್ಕ್ ಎಸ್, ಯಕ್ಷಗುರು ರಾಕೇಶ್ ರೈ ಅಡ್ಕ, ಸುರತ್ಕಲ್ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ ಭಾಗವಹಿಸಲಿದ್ದಾರೆ. 
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಮತ್ತು ರಾಷ್ಟ್ರ‌ಮಟ್ಟದಲ್ಲಿ ಸಾಧನೆಗೈದ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿಯಲ್ಲಿ ಮತ್ತು ಪಿಯುಸಿಯಲ್ಲಿ  ಶೇಕಡಾ 90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಯಕ್ಷಸಿರಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ತಿಳಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article