-->


ತೋಕೂರು ಸ್ಪೋರ್ಟ್ಸ್ ಕ್ಲಬ್‌ನಲ್ಲಿ "ಗಲಾಟೆ ಸಂಸಾರ" ಧಾರಾವಾಹಿಯ ಶೀರ್ಷಿಕೆ ಹಾಡು ಬಿಡುಗಡೆ

ತೋಕೂರು ಸ್ಪೋರ್ಟ್ಸ್ ಕ್ಲಬ್‌ನಲ್ಲಿ "ಗಲಾಟೆ ಸಂಸಾರ" ಧಾರಾವಾಹಿಯ ಶೀರ್ಷಿಕೆ ಹಾಡು ಬಿಡುಗಡೆ

ತೋಕೂರು:ಕಲಾ ಸಾಧಕರನ್ನು ಪ್ರೋತ್ಸಾಯಿಸಿ ಬೆಳೆಸಿದಲ್ಲಿ ಅವರ ಪ್ರತಿಭೆಗೆ ಮುಕ್ತ ಅವಕಾಶ ನೀಡಿದಂತಾಗುತ್ತದೆ ಎಂದು ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೂಸೈಟಿಯ ಅಧ್ಯಕ್ಷ ಎಚ್. ವಸಂತ ಬೆರ್ನಾಡ್ ಹೇಳಿದರು.
ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಪ್ರಾಯೋಜಕ್ವದಲ್ಲಿ 
 ಶ್ರೀಗುರುನಮನಸಂತೃಪ್ತಿ ಸಿನಿಮಾ ನಿರ್ಮಾಣ ಸಂಸ್ಥೆಯಿಂದ ನಿರ್ಮಿಸಿರುವ  "ಗಲಾಟೆ ಸಂಸಾರ" ಕನ್ನಡ ಧಾರಾವಾಹಿಯ ಶೀರ್ಷಿಕೆ ಹಾಡನ್ನು  ಹಳೆಯಂಗಡಿ ಬಳಿಯ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನ ವಿಶೇಷ ಸಹಕಾರದಲ್ಲಿ ಕ್ಲಬ್ ನ ಸಭಾಂಗಣದಲ್ಲಿ ಅನಾವರಣಗೊಳಿಸಿ ಅವರು ಮಾತನಾಡಿದರು.
ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷರಾದ ಗುರುರಾಜ್ ಎಸ್. ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸಾರದಲ್ಲಿನ ಸ್ವಾರಸ್ಯವನ್ನು ಹಾಸ್ಯ ಮಿಶ್ರಿತವಾಗಿ ನೀಡುವ ಪ್ರಯತ್ನಕ್ಕೆ ಎಲ್ಲರ ಪ್ರೋತ್ಸಾಹ ಸಿಗಲಿ ಎಂದರು.
ಈ ಸಂದರ್ಭದಲ್ಲಿ  ಎರಡು ಕುಟುಂಬಗಳಿಗೆ ಪಡಿತರವನ್ನು ವಿತರಿಸಲಾಯಿತು. 
ಕ್ಲಬ್ ನ ವಿದ್ಯಾ ನಿಧಿಗೆ ಆರ್ಥಿಕ ಸಹಾಯವನ್ನು ನರೇಂದ್ರ ಕೆರೆಕಾಡು ಹಸ್ತಾಂತರಿಅಇದರು.
 ಹಳೆಯಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಅರುಣ್‌ಕುಮಾರ್, ಮಂಗಳೂರಿನ ಕುವೆಲ್ಲೋ ಬ್ರದರ್‍ಸ್ ಸಿನಿ ಕ್ರಿಯೇಶನ್ಸ್‌ನ ಲ್ಯಾನ್ಸಿ ಕುವೆಲ್ಲೋ, ಪಡುಪಣಂಬೂರು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಮೋಹನ್‌ದಾಸ್, ಮಂಗಳೂರಿನ ಕಲಾಭಿ ಸಂಸ್ಥೆಯ ಗೌರವಾಧ್ಯಕ್ಷ ಸುರೇಶ್ ಬಿ. ವರ್ಕಾಡಿ, ಕ್ಲಬ್ ನ ಗೌರವಾಧ್ಯಕ್ಷ ಪ್ರಶಾಂತ್ ಕುಮಾರ್ ಬೇಕಲ್, ಮಹಿಳಾ ಕಾರ್ಯಾಧ್ಯಕ್ಷೆ ಯಶೋಧಾ ದೇವಾಡಿಗ, ಧಾರಾವಾಹಿಯ ನಿರ್ದೇಶಕ ದೇವಿಪ್ರಕಾಶ್, ಛಾಯಾಗ್ರಾಹಕ ಹರೀಶ್ ಪಿ. ಕೋಟ್ಯಾನ್ ಉಪಸ್ಥಿತರಿದ್ದರು.  
ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ದೀಪಕ್ ಸುವರ್ಣ ಸ್ವಾಗತಿಸಿದರು,
ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀಮತಿ ಗೀತಾ ಶೆಟ್ಟಿಗಾರ್ ಪ್ರಾರ್ಥಿಸಿದರು.
 ಕಲಾವಿದ ನರೇಂದ್ರ ಕೆರೆಕಾಡು ಪ್ರಸ್ತಾವನೆಗೈದರು. 
ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ ವಂದಿಸಿದರು. 
ಕಾರ್ಯಾಧ್ಯಕ್ಷ ಸಂತೋಷ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article