
ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ
Tuesday, October 22, 2024
ಹಳೆಯಂಗಡಿ : ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಷಷ್ಟಿ ಮಹೋತ್ಸವ ಡಿಸೆಂಬರ್ 1ರಿಂದ 8 ರವರೆಗೆ ನಡೆಯಲಿದ್ದು ಪೂರ್ವಭಾವಿಯಾಗಿ ಶ್ರೀ ದೇವರ ಸನ್ನಿಧಿಯಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು
ಈ ಸಂದರ್ಭ ಕ್ಷೇತ್ರದ ಅರ್ಚಕ ಮಧುಸೂಧನ ಆಚಾರ್ಯ, ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ರಾವ್,ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿ, ಸದಸ್ಯ ಪುರುಷೋತ್ತಮ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು