ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ಅತ್ಯುತ್ತಮ ಸಹಕಾರಿ ಸಂಸ್ಥೆ ಪ್ರಶಸ್ತಿ
Saturday, November 23, 2024
ಬಜಪೆ:ರಾಷ್ಟ್ರ, ರಾಜ್ಯ, ಜಿಲ್ಲಾ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡು ಸಹಕಾರಿ ರಂಗದ ಅಗ್ರಗಣ್ಯ ಸಂಸ್ಥೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ಈ ವರ್ಷದ "ಅತ್ಯುತ್ತಮ ಸಹಕಾರಿ ಸಂಸ್ಥೆ” ಪ್ರಶಸ್ತಿ ಲಭಿಸಿದೆ.ಈ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷ ಸಹಕಾರಿ ರತ್ನ ಮೋನಪ್ಪ ಶೆಟ್ಟಿ ಎಕ್ಕಾರು ಇವರಿಗೆ ಮಂಗಳೂರಿನಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಅವರು ಪ್ರಧಾನ ಮಾಡಿದರು.
ಈ ಸಂದರ್ಭ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಇಲಾಖಾ ಸಚಿವ ದಿನೇಶ್ ಗುಂಡುರಾವ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರಕುಮಾರ್ ಹಾಗೂ ಇನ್ನಿತರ ಗಣ್ಯಾತೀಗಣ್ಯರು ಉಪಸ್ಥಿತರಿದ್ದರು.