-->


ರಾಜ್ಯ ಸರ್ಕಾರದ ಜನಪರ ಕೆಲಸಕ್ಕೆ ಮತದಾರರ ಜೈ

ರಾಜ್ಯ ಸರ್ಕಾರದ ಜನಪರ ಕೆಲಸಕ್ಕೆ ಮತದಾರರ ಜೈ

ಮಂಗಳೂರು: ದ.ಕ ಜಿಲ್ಲೆಯ ಗ್ರಾಮ ಪಂಚಾಯಿತಿಗಳ 24 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 19 ಅಭ್ಯರ್ಥಿಗಳು ಹಾಗು ಬಂಟ್ವಾಳ ಪುರಸಭೆಯ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದು, ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯ, ಜನಪರ ಕೆಲಸ ಹಾಗು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಯನ್ನು ಜನತೆ ಒಪ್ಪಿಕೊಂಡಿದ್ದಾರೆ ಎನ್ನುವುದು ಈ ಫಲಿತಾಂಶದಿಂದ ಸ್ಪಷ್ಟವಾಗಿ ಗೋಚರಿಸಿದೆ
ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಅರ್ ಪೂಜಾರಿ ಹೇಳಿದ್ದಾರೆ.ವಿಪಕ್ಷಗಳ ವಕ್ಫ್, ರೇಷನ್ ಕಾರ್ಡ್ ಗೊಂದಲ ಕುರಿತ ಅಪಪ್ರಚಾರಗಳಿಗೆ ಪ್ರಬುದ್ಧ ಮತದಾರರು ಯಾವುದೇ ಮನ್ನಣೆ ನೀಡಿಲ್ಲ ಎಂಬುದು ಸ್ಪಷ್ಟವಾಗಿದೆ. ಇದು ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಪುನಶ್ಚೇತನ ಮತ್ತು ಮುಂಬರುವ ಎಲ್ಲ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ಫಲಿತಾಂಶ ಮತ್ತು ಈ ಫಲಿತಾಂಶ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈಯನ್ನು ಮತ್ತಷ್ಟು ಬಲಪಡಿಸಿದೆ. ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರು, ಪಕ್ಷದ ಮುಖಂಡರು ಹಾಗು ಮತದಾರರಿಗೆ  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಅರ್ ಪೂಜಾರಿ ಅವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.


Ads on article

Advertise in articles 1

advertising articles 2

Advertise under the article