ಆಧಾರ್ ನೋಂದಣಿ, ಮಧುಮೇಹ ಜಾಗೃತಿ, ಉಚಿತ ಕಣ್ಣಿನ ಚಿಕಿತ್ಸೆ ಹಾಗೂ ಆರೋಗ್ಯ ತಪಾಸಣಾ ಉಚಿತ ಶಿಬಿರ
ಗುರುಪುರ : ಶ್ರೀ ಕೃಷ್ಣ ಮಿತ್ರ ಮಂಡಳಿ ಗುರುಪುರ ಇದರ ವತಿಯಿಂದ ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗ, ಗಂಜಿಮಠದ ಆಯುರ್‍ಸ್ಪರ್ಶ್ ಡಯಾಬಿಟಿಕ್ ಇನ್ನೋವೇಟಿವ್ ಫೌಂಡೇಶನ್(ರಿ), ಕಂಕನಾಡಿ ಪಡೀಲ್‍ನ ಲಯನ್ಸ್ ಕ್ಲಬ್ ಮತ್ತು ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಆಸ್ಪತ್ರೆ ಇವರ ಸಹಭಾಗಿತ್ವದಲ್ಲಿ ನ. 24ರಂದು ಗುರುಪುರ ಶ್ರೀ ಸತ್ಯದೇವತಾ ಸಭಾಗೃಹದಲ್ಲಿ ಆಧಾರ್ ನೋಂದಣಿ, ಮಧುಮೇಹ ಜಾಗೃತಿ, ಉಚಿತ ಕಣ್ಣಿನ ಚಿಕಿತ್ಸೆ ಹಾಗೂ ಆರೋಗ್ಯ ತಪಾಸಣಾ ಉಚಿತ ಶಿಬಿರ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಉತ್ತರ ಬಿಜೆಪಿ ಮಂಡಲದ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಮಾತನಾಡಿ, ಶ್ರೀ ಕೃಷ್ಣ ಮಿತ್ರ ಮಂಡಳಿಯಿಂದ ಇನ್ನೂ ಹೆಚ್ಚಿನ ಸಮಾಜಮುಖಿ ಕೆಲಸಗಳು ನಡೆಯಲಿ. ಬ್ಯಾಂಕ್‍ಗಳಲ್ಲಿ ಲಭ್ಯವಿರದ ಸೇವೆಗಳು ಈಗ ಭಾರತೀಯ ಅಂಚೆ ಇಲಾಖೆಯಲ್ಲಿ ಲಭ್ಯವಿವೆ. ಇಂತಹ ಶಿಬಿರ ಆಯೋಜನೆಯಿಂದ ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಪ್ರಯೋಜನವಾಗಲಿದೆ ಎಂದರು.
ಅಂಚೆ ಇಲಾಖೆಯ ಉಪ-ಅಧೀಕ್ಷಕ ದಿನೇಶ್, ಮಂಗಳೂರು ಕಂಕನಾಡಿಯ ಲಯನ್ಸ್ ಕ್ಲಬ್ ಅಧ್ಯಕ್ಷೆ ಹರಿಣಿ ಸಿ. ಶೆಟ್ಟಿ, ಗಂಜಿಮಠದ ಆಯುರ್‍ಸ್ಪರ್ಶ ಆಸ್ಪತ್ರೆಯ ಅಧ್ಯಕ್ಷ ಡಾ. ಸತೀಶ್ ಶಂಕರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಡಾ. ವೀರೇಂದ್ರ ಭಟ್ ಗುರುಪುರ, ಶ್ರೀ ಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷ ಯತೀಶ್ ಕುಲಾಲ್, ಗೌರವಾಧ್ಯಕ್ಷ ಹರೀಶ್ ಭಂಡಾರಿ ಗುರುಪುರ, ನಾಗರಾಜ್ ಕಾಮತ್, ಡಾ. ಗೋವಿಂದ ಉಪಸ್ಥಿತರಿದ್ದರು. ಲಕ್ಷ್ಮಣ್ ಶೆಟ್ಟಿಗಾರ, ಜಿ. ಎಂ. ಉದಯ ಭಟ್, ರಾಜೇಶ್ ಸುವರ್ಣ, ಶ್ರೀಕರ ವಿ. ಶೆಟ್ಟಿ ಸುಧೀರ್ ಕಾಮತ್, ನಳಿನಿ ಶೆಟ್ಟಿ, ಗಜಾನನ ಪ್ರಭು, ಸುನಿಲ್ ಜಲ್ಲಿಗುಡ್ಡೆ, ಹರೀಶ್ ಬಳ್ಳಿ ಹಾಗೂ ಮಂಡಳಿಯ ಪದಾಧಿಕಾರಿಗಳು ಸಹಕರಿಸಿದರು. ಸ್ವಾಗತಿಸಿ ನಿರೂಪಿಸಿದ ಪ್ರಜ್ವಲ್ ಗುರುಪುರ ವಂದಿಸಿದರು.
ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ನಡೆದ ಶಿಬಿರದಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು. ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಶಿಬಿರಕ್ಕೆ ಭೇಟಿ ಆಯೋಜಕರನ್ನು ಅಭಿನಂದಿಸಿದರು. ಆಧಾರ್ ತಿದ್ದುಪಡಿ, ಹೊಸ ಆಧಾರ್ ಕಾರ್ಡ್, ಆರೋಗ್ಯ ತಪಾಸಣೆ. ಮಧುಮೇಹ ಪರೀಕ್ಷೆ, ಕಣ್ಣಿನ ತಪಾಸಣೆ, ಕನ್ನಡಕ ವಿತರಣೆ, ಪಾರ್ಸ್‍ಪೋರ್ಟ್, ಅಂಚೆ ವಿಮೆ ಮತ್ತಿತರ ಸೇವೆಗಳ ಪ್ರಯೋಜನ ಪಡೆದುಕೊಂಡರು. ಅಂಚೆ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಸ್ಥಳೀಯ ನಿವಾಸಿ ಕರುಣಾಕರ ಅವರನ್ನು ಮಂಡಳಿ ವತಿಯಿಂದ ಗೌರವಿಸಲಾಯಿತು.