ಕಟೀಲು:ನ.15- ಕೆರಿಯರ್ ಸ್ಪೆಕ್ಟ್ರಮ್ - 2024 ಕಾರ್ಯಕ್ರಮ
Thursday, November 14, 2024
ಕಟೀಲು:ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜು ಕಟೀಲು ಇಲ್ಲಿನ ಐಕ್ಯೂಎಸಿ , ಹಳೆವಿದ್ಯಾರ್ಥಿ ಸಂಘ ಹಾಗೂ ಕ್ಯಾಪ್ಸ್ ಎಜುಕೇಶನ್ ಟು ಪ್ರೊಪೆಸ್ (ಸಿಎ ಶಿಕ್ಷಣಕ್ಕಾಗಿ ಪ್ರವರ್ತಕ ಸಂಸ್ಥೆ) ಇವುಗಳ ಜಂಟಿ ಆಯೋಜನೆಯಲ್ಲಿ 'ಕೆರಿಯರ್ ಸ್ಪೆಕ್ಟ್ರಮ್ - 2024' ದ್ವಿತೀಯ ಪಿಯುಸಿ ನಂತರ ಮುಂದೇನು? ಎನ್ನುವ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ , ಅಂತರ್ ಪದವಿಪೂರ್ವ ಕಾಲೇಜು ರಸಪ್ರಶ್ನೆ ಸ್ಪರ್ಧೆ ಮತ್ತು ಜಾನಪದ ಸಮೂಹ ಗೀತೆ ಸ್ಪರ್ಧೆಗಳು ನ.15 ರ ಶುಕ್ರವಾರದಂದು ಬೆಳಗ್ಗೆ 9 ಗಂಟೆಗೆ ಕಾಲೇಜಿನ ವಾಗ್ದೇವಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಆನುವಂಶಿಕ ಮೊಕ್ತೇಸರ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ವಹಿಸಲಿದ್ದಾರೆ. ಕ್ಯಾಪ್ಸ್ ಪೌಂಡೇಶನ್ ನ ಸಂಸ್ಥಾಪಕ ಸಿ.ಎ ಚಂದ್ರಶೇಖರ್ ಶೆಟ್ಟಿ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.ಅವರು ದ್ವಿತೀಯ ಪಿ.ಯು.ಸಿ ನಂತರ ಮುಂದೇನು? ಎಂಬ ವಿಷಯದಲ್ಲಿ ವಾಣಿಜ್ಯ ವಿಷಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ ನೀಡಲಿದ್ದಾರೆ. ನಂತರ ದ್ವಿತೀಯ ಪಿಯುಸಿ ವಾಣಿಜ್ಯ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಷಯಕ್ಕೆ ಸಂಬಂಧಿಸಿದ ರಸ ಪ್ರಶ್ನಾ ಸ್ಪರ್ಧೆ ಹಾಗೂ ಜನಪದ ಸಮೂಹ ಗೀತೆ ಸ್ಪರ್ಧೆ ಜರುಗಲಿದೆ.
ಕಾರ್ಯಕ್ರಮದಲ್ಲಿ ಕೆ.ವಾಸುದೇವ ಆಸ್ರಣ್ಣ ಅವರು ಆಶೀರ್ವಚನ ನೀಡಲಿದ್ದು , ದೇವಳದ ಅನುವಂಶಿಕ ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ ,ಹರಿನಾರಾಯಣದಾಸ ಆಸ್ರಣ್ಣ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆಡಳಿತ ಮಂಡಳಿಯ ಬಿಪಿನ್ ಚಂದ್ರ ಶೆಟ್ಟಿ ಕೊಡೆತ್ತೂರುಗುತ್ತು , ಹಳೆವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಹರೀಶ್ ಮಟ್ಟಿ , ಕಿರಣ್ ಪಕ್ಕಳ , ಕಿರಣ್ ಕುಮಾರ್ ಶೆಟ್ಟಿ ಭಾಗವಹಿಸಲಿದ್ದಾರೆ .ವಿದ್ಯಾಸಂಸ್ಥೆಯ ಪ್ರಾಂಶುಪಾಲ ಡಾ।ವಿಜಯ್.ವಿ. ಅವರ ಮಾರ್ಗದರ್ಶನದಲ್ಲಿ ಐಕ್ಯೂಎಸಿ ಮತ್ತು ಹೆಚ್ ಅರ್ ಡಿ ಮುಖ್ಯಸ್ಥ, ಉಪನ್ಯಾಸಕ ಪ್ರದೀಪ್ ಡಿ.ಎಮ್.ಹಾವಂಜೆಯವರು ಕಾರ್ಯಕ್ರಮದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದು, ಶಿಕ್ಷಕ ಡಾ।ಪದ್ಮನಾಭ ಮರಾಠೆ, ಬೋಧಕ-ಬೋಧಕೇತರ ಸಿಬ್ಬಂದಿಗಳು , ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ. ಬಳಿಕ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.