ಕಟೀಲು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
Saturday, November 2, 2024
ಕಟೀಲು : ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆ, ಇಂಗ್ಲಿಷ್ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಕನ್ನಡ ಮಾಧ್ಯಮ ಮತ್ತು ಇಂಗ್ಲೀಷ್ ಮಾಧ್ಯಮದ ವಿದ್ಯಾರ್ಥಿಗಳು ಹಚ್ಚೇವು ಕನ್ನಡದ ದೀಪ, ಬಾರಿಸು ಕನ್ನಡ ಡಿಂಡಿಮವ ಹಾಡನ್ನು ಹಾಡಿದರು. ರಿತಿಕಾ ಹಾಗೂ ಕೌಶಿಕ್ ಹಾಗೂ ಇಂಗ್ಲೀಷ್ ಮಾಧ್ಯಮದ ಮುಖ್ಯಶಿಕ್ಷಕರಾದ ಚಂದ್ರಶೇಖರ ಭಟ್, ಮುಖ್ಯ ಶಿಕ್ಷಕಿ ಸರೋಜಿನಿ ಕನ್ನಡ ರಾಜ್ಯೋತ್ಸವದ ಬಗ್ಗೆ ಮಾತನಾಡಿದರು. ಶಿಕ್ಷಕಿ ವಿದ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕಿ ಅಕ್ಷತಾ ಸ್ವಾಗತಿಸಿದರು. ಅನೂಷಾ ದಿವಾಣ ವಂದಿಸಿದರು.