ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಸುರತ್ಕಲ್ ಬಂಟರ ಸಂಘದಿಂದ ಸನ್ಮಾನ
Friday, November 22, 2024
ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ಕರ್ನಾಟಕ ಸುವರ್ಣ ಪ್ರಶಸ್ತಿ ಪುರಸ್ಕೃತರಾದ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಸುರತ್ಕಲ್ ಬಂಟರ ಸಂಘವು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರಾದ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಅವರ ನೇತೃತ್ವದಲ್ಲಿ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಪೂಂಜ ಅವರು ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಸಂಘದ ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಪಟ್ಲ ಫೌಂಡೇಶನ್ ಟ್ರಸ್ಟ್ ನ ಟ್ರಸ್ಟಿಗಳಾದ ಸಹನಾ ರಾಜೇಶ್ ರೈ, ಸವಿತಾ ಭವಾನಿ ಶಂಕರ್ ಶೆಟ್ಟಿ, ಕೇಸರಿ ಎಸ್ ಪೂಂಜ, ಪಟ್ಲ ಟ್ರಸ್ಟ್ ನ ಕೇಂದ್ರೀಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಬಾಳ ಜಗನ್ನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.