-->

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಪಕ್ಷಿಕೆರೆ ಒಂದೇ ಕುಟುಂಬದ ಮೂವರು ಸಾವು ಪ್ರಕರಣ,ತಾಯಿ ಮಗಳಿಗೆ ಸೆಶನ್ಸ್ ಕೋರ್ಟ್ ಜಾಮೀನು ಮಂಜೂರು

ಪಕ್ಷಿಕೆರೆ ಒಂದೇ ಕುಟುಂಬದ ಮೂವರು ಸಾವು ಪ್ರಕರಣ,ತಾಯಿ ಮಗಳಿಗೆ ಸೆಶನ್ಸ್ ಕೋರ್ಟ್ ಜಾಮೀನು ಮಂಜೂರು

 
ಮೂಲ್ಕಿ : ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆಯಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮೃತ ಕಾರ್ತಿಕ್‍ರ ತಾಯಿ ಶ್ಯಾಮಲ ಭಟ್(61) ಮತ್ತು ಅವರ  ಮಗಳು ಕಣ್ಮಣಿ ರಾವ್(36) ಅವರಿಗೆ ದ.ಕ ಜಿಲ್ಲಾ ಸೆಶನ್ಸ್ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್(32)ತನ್ನ ಪತ್ನಿ ಪ್ರಿಯಾಂಕ(28)ಮತ್ತು ನಾಲ್ಕು ವರ್ಷದ ಮಗು ಹೃದಯ್ ಎಂಬವರನ್ನು ಕೊಲೆ ಮಾಡಿ ಬಳಿಕ ತಾನು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ನವೆಂಬರ್ 9ರಂದು ಪ್ರಕರರಣ ಬೆಳಕಿಗೆ ಬಂದಿತ್ತು. ಡೆತ್ ನೋಟ್‍ನಲ್ಲಿ ಘಟನೆಗೆ ತನ್ನ ತಾಯಿ ಮತ್ತು ಸಹೋದರಿಯ ಕಿರುಕುಳ ಕಾರಣವೆಂದು ಪ್ರಸ್ತಾಪಿಸಿದ್ದ. ಈ ಬಗ್ಗೆ ಮೂಲ್ಕಿ ಪೊಲೀಸರು ಕಾರ್ತಿಕ್ ಭಟ್‍ನ ಪತ್ನಿ ಪ್ರಿಯಾಂಕಳ ತಾಯಿ ನೀಡಿದ ದೂರಿನ ಆಧಾರದಲ್ಲಿ ಕಾರ್ತಿಕ್‍ನ ತಾಯಿ ಶ್ಯಾಮಲ ಭಟ್ ಮತ್ತು ಮಗಳು ಕಣ್ಮಣಿಯನ್ನು ಬಂಧಿಸಿ ಮೂಡುಬಿದಿರೆ ಕೋರ್ಟ್‍ಗೆ ಹಾಜರುಪಡಿಸಿದ್ದು ಕೋರ್ಟ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಗಳ ಪರ ಮೂಡುಬಿದಿರೆ ವಕೀಲರಾದ ಶರತ್ ಶೆಟ್ಟಿ ಜಿಲ್ಲಾ ಸೆಶನ್ಸ್ ಕೋರ್ಟ್‍ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ