ಕ್ರೀಡೆಯಲ್ಲಿ ಭಾಗವಹಿಸುವಿಕೆ ಮುಖ್ಯವಾದುದು - ನವೀನ್ ಕುಮಾರ್ ಕೊಡೆತ್ತೂರು
Wednesday, November 13, 2024
ತೋಕೂರು:ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಜಿಲ್ಲಾಡಳಿತ ದ.ಕ ಜಿಲ್ಲಾ ಪಂಚಾಯತ್ ಪಡುಪಣಂಬೂರು, ತಾಲೂಕು ಮತ್ತು ಜಿಲ್ಲಾ ಯುವಜನ ಒಕ್ಕೂಟ ದ.ಕ ಜಿಲ್ಲೆ ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ,ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ)ತೋಕೂರು,ಹಳೆಯಂಗಡಿ ಇದರ ಆಶ್ರಯದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಮಾಜಿ ಪ್ರಧಾನಿ ದಿ|ಜವಾಹರಲಾಲ್ ನೆಹರು ಆವರ ಜನ್ಮದಿನಾಚರಣೆ ಪ್ರಯುಕ್ತ ಮಕ್ಕಳ ಕ್ರೀಡಾ ಕೂಟವನ್ನು ಸಂಸ್ಥೆಯ ನೃತ್ಯ ತರಗತಿಯ ಶಿಕ್ಷಕ ನವೀನ್ ಕುಮಾರ್ ಕೊಡೆತ್ತೂರು ದೀಪ ಬೆಳಗಿಸಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ದೈಹಿಕವಾಗಿ ಮಾನಸಿಕವಾಗಿರ ಬೇಕಾದರೆ ಕ್ರೀಡಾ ಕೂಟದಲ್ಲಿ ಪಾಲ್ಗೊಳ್ಳುವುದು ಅತೀ ಮುಖ್ಯ ಆದರೆ ಬಹುಮಾನ ಪಡೆಯುವುದು ಮುಖ್ಯವಲ್ಲ ಎಂದರು.
ಈ ಸಂದರ್ಭ ಸಂಸ್ಥೆಯ ಗೌರವಾಧ್ಯಕ್ಷ ಪ್ರಶಾಂತ್ ಕುಮಾರ್ ಬೇಕಲ್,ಅಧ್ಯಕ್ಷ ದೀಪಕ್ ಸುವರ್ಣ,ಕಾರ್ಯಾಧ್ಯಕ್ಷ ಸಂತೋಷ್ ದೇವಾಡಿಗ,ಕ್ರೀಡಾ ಕಾರ್ಯದರ್ಶಿ ಯೂನೂಸ್, ಮಹಿಳಾ ಕಾರ್ಯಕಾರಿ ಸಮಿತಿ ಕಾರ್ಯಾಧ್ಯಕ್ಷೆ ಶ್ರೀಮತಿ ಯಶೋಧ ದೇವಾಡಿಗ,ಕಾರ್ಯದರ್ಶಿ ಶ್ರೀಮತಿ ಸುರೇಖಾ ಕಲ್ಲಾಪು,ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀಮತಿ ಗೀತಾ ಸದಾನಂದ , ನೃತ್ಯ ತರಗತಿಯ ಹಿರಿಯ ವಿದ್ಯಾರ್ಥಿಗಳಾದ ಮಾಸ್ಟರ್ ಆರ್ಯನ್,ಕುಮಾರಿ ರಕ್ಷಾ ಶೆಟ್ಟಿಗಾರ್ ಉಪಸ್ಥಿತರಿದ್ದರು. ಕ್ರೀಡಾ ಕೂಟದಲ್ಲಿ ಸಂಸ್ಥೆಯ ನೃತ್ಯ, ಕರಾಟೆ ತರಗತಿಯ ವಿದ್ಯಾರ್ಥಿಗಳಿಗೆ, ಸಂಸ್ಥೆಯ ಸದಸ್ಯರು,ಸದಸ್ಯೆಯರ ಮಕ್ಕಳಿಗಾಗಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸುಮಾರು 50 ಮಕ್ಕಳು ಭಾಗವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ದೀಪಕ್ ಸುವರ್ಣ ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಸಂತೋಷ್ ದೇವಾಡಿಗ ವಂದಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀಮತಿ ಗೀತಾ ಸದಾನಂದ ಕಾರ್ಯಕ್ರಮ ನಿರೂಪಿಸಿದರು.