ಪಡುಪಣಂಬೂರು ಶ್ರೀ ಉಮಾಮಹೇಶ್ವರ ಮಹಾ ಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
Saturday, December 28, 2024
ಹಳೆಯಂಗಡಿ : ಪಡುಪಣಂಬೂರು ಶ್ರೀ ಉಮಾಮಹೇಶ್ವರ ಮಹಾ ಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾ ಮಹೋತ್ಸವ ಫೆಬ್ರವರಿ 4ರಿಂದ 16ರವರೆಗೆ ನಡೆಯಲಿದ್ದು ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕ್ಷೇತ್ರದಲ್ಲಿ ನಡೆಯಿತು.
ಕ್ಷೇತ್ರದ ಅರ್ಚಕ ಹಾಗೂ ಆಡಳಿತ ಮೊಕ್ತಸರ ರಂಗನಾಥ ಭಟ್ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು ಹಿರಿಯ ಸಾಹಿತಿ ಶಕುಂತಳಾ ಭಟ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು
ಈ ಸಂದರ್ಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ರಾಮದಾಸ್ ಪುತ್ರನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.