ಕಟೀಲು ದೇವಳಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಭೇಟಿ
Wednesday, December 4, 2024
ಬಜಪೆ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅವರು ಮಂಗಳವಾರದಂದು ಭೇಟಿ ನೀಡಿ ಶ್ರೀದೇವಿಯ ದರ್ಶನ ಪಡೆದರು.ದೇವಸ್ಥಾನದ ವತಿಯಿಂದ ಉಪೇಂದ್ರ ಅವರನ್ನು ಶ್ರೀದೇವರ ಶೇಷವಸ್ತ್ರವನ್ನು ನೀಡಿ ಗೌರವಿಸಲಾಯಿತು.
ಯುಟ್ಯೂಬ್ ಲಿಂಕ್ ಕ್ಲಿಕ್ ಮಾಡಿ
https://youtu.be/UY1rkYFbD6Q?si=ZqDLZLmY67xZ06Ug
ದೇವಳದ ಪ್ರಧಾನ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ ಅವರಿಂದ ದೇವಳದ ಕಾರ್ಯವೈಖರಿ, ಶಿಕ್ಷಣ ಸಂಸ್ಥೆ ಮತ್ತಿತರ ವ್ಯವಸ್ಥೆಗಳ ಬಗ್ಗೆ ಉಪೇಂದ್ರ ಅವರು ಮಾಹಿತಿಯನ್ನು ಪಡೆದುಕೊಂಡರು. ನಂತರ ಕ್ಯಾಪ್ಸ್ ಫೌಂಡೇಷನ್‌ನ ಕಾಟನ್ ಬ್ಯಾಗ್ ಗಳನ್ನು ಅಭಿಮಾನಿಗಳಿಗೆ ವಿತರಿಸಿ, ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದರು.ಹಾಗೂ ಕ್ಯಾಪ್ಸ್ ಫೌಂಡೇಷನ್‌ನ ಸಮಾಜಮುಖಿ ಕೆಲಸಗಳ ಬಗ್ಗೆ ತಿಳಿದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ದೇವಸ್ಥಾನದ ಪ್ರಧಾನ ಅರ್ಚಕರಾದ ಕಮಲಾದೇವಿಪ್ರಸಾದ ಆಸ್ರಣ್ಣ,ಹರಿನಾರಾಯಣ ದಾಸ ಆಸ್ರಣ್ಣ,ಕ್ಯಾಪ್ಸ್ ಫೌಂಡೇಶನ್ ನ ಚಂದ್ರಶೇಖರ ಶೆಟ್ಟಿ,ದೇವಳದ ಅರ್ಚಕವೃಂದ ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.
ರಿಯಲ್ ಸ್ಟಾರ್ ಉಪೇಂದ್ರ ಅವರ ಜೊತೆ ಸೆಲ್ಪಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.