ಕಿನ್ನಿಗೋಳಿ ಬಸ್ ಚಾಲಕ ನಿರ್ವಾಹಕರ ಸಂಘದ 12 ನೇ ವಾರ್ಷಿಕೋತ್ಸವ
Tuesday, December 24, 2024
ಕಿನ್ನಿಗೋಳಿ : ಕಿನ್ನಿಗೋಳಿ ಬಸ್ಸು ಚಾಲಕ ನಿರ್ವಾಹಕ ಸಂಘದ 12ನೇ ವಾರ್ಷಿಕೋತ್ಸವ ಕಿನ್ನಿಗೋಳಿ ಬಸ್ ನಿಲ್ದಾಣದ ಬಳಿ ವೇದಿಕೆಯಲ್ಲಿ ನಡೆಯಿತು.
ಈ ಸಂದರ್ಭ ಕಿನ್ನಿಗೋಳಿ ಬಸ್ ಮಾಲಕರ ಸಂಘದ ಅಧ್ಯಕ್ಷ ದುರ್ಗಾ ಪ್ರಸಾದ್ ಹೆಗ್ಡೆ,ಎಪಿಎಂಸಿ ಸದಸ್ಯ ಪ್ರಮೋದ್ ಕುಮಾರ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ದಿವಾಕರ ಕರ್ಕೇರ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಕಾಶ್ ಕಿನ್ನಿಗೋಳಿ,ಬಸ್ ಚಾಲಕ ನಿರ್ವಾಹಕರ ಸಂಘದ ಗೌರವಾಧ್ಯಕ್ಷ ಭಾಸ್ಕರ ಪೂಜಾರಿ, ಅಧ್ಯಕ್ಷ ಸಂದೀಪ್ ಅಂಚನ್, ಕಾರ್ಯದರ್ಶಿ ಕ್ಯಾನ್ಯೂಟ್ ಕ್ಯಾಸ್ತೆಲಿನೋ,ಕೋಶಾಧಿಕಾರಿ ಹುಸೇನ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು. ಶರತ್ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಠಾಣೆಯ ಯೋಗೇಶ್ ಎಸ್ ಆರ್, ಹಾಗೂ ಮುಲ್ಕಿ ಪೊಲೀಸ್ ಠಾಣೆಯ ಎಎಸ್‌ಐ ಸಂಜೀವ ರವರನ್ನು ಸನ್ಮಾನಿಸಲಾಯಿತು. ಬಸ್ ಚಾಲಕ ನಿರ್ವಾಹಕರವರನ್ನು ಗೌರವಿಸಲಾಯಿತು ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಗಳು ಹಾಗೂ ತುಳುನಾಟಕ ನಡೆಯಿತು.