ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲ ಗಂಗಾಧರನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಸಂಪನ್ನ ಮಹೋತ್ಸವ
Thursday, January 2, 2025
ಕಾವೂರು:ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾಮಠದಲ್ಲಿ ನಡೆಯುತ್ತಿರುವ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲ ಗಂಗಾಧರನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಸಂಪನ್ನ ಮಹೋತ್ಸವ ಹಾಗೂ ಶಾಖಾಮಠದ ರಜತ ಮಹೋತ್ಸವದ ಎರಡನೇ ದಿನದ ವಿವಿಧ ಪುಣ್ಯ ಕಾರ್ಯಗಳಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿ ಅನುಗ್ರಹ ಪಡೆದುಕೊಂಡರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾಮಠದ ಭಕ್ತ ವೃಂದ ಹಾಗೂ ಊರ ಸಮಸ್ತರಿಂದ ಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಗೆ ತುಲಾಭಾರ ಸೇವೆ ನೆರೆವೇರಿತು.ಈ ಪುಣ್ಯ ಕಾರ್ಯದಲ್ಲಿ ಅಪಾರ ಸಂಖ್ಯೆಯ ಭಕ್ತವೃಂದ ಪಾಲ್ಗೊಂಡು ಪುನೀತರಾದರು.