-->


6.80ಕೋ. ರೂ. ಮೌಲ್ಯದ ಮಾದಕ ವಸ್ತುಗಳ ನಾಶ

6.80ಕೋ. ರೂ. ಮೌಲ್ಯದ ಮಾದಕ ವಸ್ತುಗಳ ನಾಶ




ಮೂಲ್ಕಿ:ಮಾದಕ ವಸ್ತುಗಳಾದ ಗಾಂಜಾ, ಎಂಡಿಎಂಎ ಮಾತ್ರೆಗಳು, ಕೋಕೈನ್ ಸಹಿತ ಸುಮಾರು 6.8 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ಬುಧವಾರ ಮೂಲ್ಕಿ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿನ ರೀ ಸಸ್ಟೇನಬಿಲಿಟಿ ಹೆಲ್ತ್ಕೇರ್ ಸೊಲ್ಯೋಷನ್ಸ್ನಲ್ಲಿ ಮಂಗಳೂರು ಪೊಲೀಸ್ ಕಮಿನಷರ್ ಅನುಪಮ್ ಅಗರವಾಲ್ ಅವರ ಮಾರ್ಗದರ್ಶನದಲ್ಲಿ ನಾಶ ಪಡಿಸಲಾಯಿತು. 
ಈ ಬಗ್ಗೆ ಮಾಹಿತಿ ನೀಡಿದ ಕಮಿಷನರ್, ಪ್ರಸ್ತುತ ವರ್ಷದಲ್ಲಿ ಒಟ್ಟು 88 ಪ್ರಕರಣಗಳನ್ನು ದಾಖಲಿಸಿ, 158 ಆರೋಪಿಗ:ನ್ನು ದಸ್ತಗಿರಿ ಮಾಡಲಾಗಿದೆ. ಅವರಿಂದ 190 ಕೆ.ಜಿ. ಗಾಂಜಾ, 7,744 ಎಂಡಿಎಂಎ ಸಹಿತ ವಿವಿಧ ಮಾಧಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 1244 ಜನರ ಮೆಲೆ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಸಹಕರಿಸುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಮಂಗಳೂರು ಕಮಿಷನರ್ ವ್ಯಾಪ್ತಿಯ 13 ಠಾಣೆಗಳಲ್ಲಿ ಈ ಪ್ರಕರಣಗಳು ದಾಖಲಾಗಿದೆ ಎಂದರು. 
ಮಾದಕ ಪ್ರಕರಣಗಳು ಹೆಚ್ಚಾಗಿದ್ದರೂ ಸಹ ಅದರ ಜಾಗೃತಿ ಕಾರ್ಯಕ್ರಮವನ್ನು ನಿರಂತರವಾಗಿ ಠಾಣೆಗಳ ಮೂಲಕ ನಡೆಸಲಾಗುತ್ತಿದೆ. ನ್ಯಾಯಾಲಯದಲ್ಲಿ ಹಲವು ಪ್ರಕರಣಗಳು ವಿಚಾರಣೆಯಲ್ಲಿದೆ. ಸಮಾಜವು ಜಾಗೃತರಾಗಬೇಕು ಎಂಬುದು ನಮ್ಮ ಉದ್ದೇಶ ಪ್ರಕರಣ ದಾಖಲಾದ ತಕ್ಷಣ ಅಪರಾಧಿಗಳನ್ನು ಬಂಧಿಸುವ ಪ್ರಕ್ರಿಯೆಯನ್ನು ಪೊಲೀಸರು ಹಿಂದೆ ಬಿದ್ದಿಲ್ಲ, ಇಲಾಖೆಯು ಸಹ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 
ಹಿರಿಯ ಅಧಿಕಾರಿಗಳ ಸಹಿತ ಎಲ್ಲಾ ಠಾಣೆಯ ಪ್ರಮುಖ ಪೊಲೀಸ್ ಇನ್ಸ್ಪೆಕ್ಟರ್ ಇದ್ದರು. 


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article