-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಮೂಲ್ಕಿ ತಾಲೂಕು ಸಮ್ಮೇಳನ ವಿದ್ಯಾರ್ಥಿಗಳಿಗೆ ಸಾಹಿತ್ಯ ಸ್ಪರ್ಧೆ

ಮೂಲ್ಕಿ ತಾಲೂಕು ಸಮ್ಮೇಳನ ವಿದ್ಯಾರ್ಥಿಗಳಿಗೆ ಸಾಹಿತ್ಯ ಸ್ಪರ್ಧೆ

ಮೂಲ್ಕಿ : ಮೂಲ್ಕಿ ತಾಲೂಕು ೨ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ ೮ರ ಶನಿವಾರ ಐಕಳ ಪೊಂಪೈ ಕಾಲೇಜಿನಲ್ಲಿ ನಡೆಯಲಿದೆ. ಖ್ಯಾತ ಸಾಹಿತಿ ಶ್ರೀಧರ ಡಿ.ಎಸ್. ಇವರ ಅಧ್ಯಕ್ಷತೆಯಲ್ಲಿ ವಿವಿಧ ಸಾಹಿತಿಗಳ ಉಪಸ್ಥಿತಿಯಲ್ಲಿ ವಿಚಾರಗೋಷ್ಟಿ ಚಿಂತನ- ಮಂಥನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಸಮ್ಮೇಳನದ ಸಲುವಾಗಿ ಮೂಲ್ಕಿ ತಾಲೂಕಿನ ಪ್ರೌಢಶಾಲೆ, ಪದವೀಪೂರ್ವ ಕಾಲೇಜು ಹಾಗೂ ಪದವಿ ಕಾಲೇಜು ಹೀಗೆ ಮೂರು ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ’ನಾನು ಓದಿದ ಒಳ್ಳೆಯ ಪುಸ್ತಕ’ ಈ ವಿಚಾರವಾಗಿ ಎ೪ ಅಳತೆಯ ಎರಡು ಪುಟ ಮೀರದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ತಾವು ಓದಿದ ಯಾವುದೇ ಸಾಹಿತ್ಯ ಪ್ರಕಾರದ ಪುಸ್ತಕದ ಕುರಿತಾಗಿ ಬರೆದು ಕಳುಹಿಸಬಹುದು. ಪ್ರತಿ ವಿಭಾಗದಲ್ಲಿ ಉತ್ತಮವಾದ ೨ ಬರಹಗಳಿಗೆ ಬಹುಮಾನ ನೀಡಲಾಗುವುದು. ವಿದ್ಯಾರ್ಥಿ ತನ್ನ ಹೆಸರು, ಶಾಲೆ, ತರಗತಿ, ದೂರವಾಣಿ ಸಂಖ್ಯೆಯೊಂದಿಗೆ ಪ್ರಬಂಧವನ್ನು ಜನಾರ್ದನ್, ಪೊಂಪೈ ಪಿಯು ಕಾಲೇಜು, ಐಕಳ, ಮೂಲ್ಕಿ ತಾಲೂಕು-೫೭೪೧೪೧, ದೂರವಾಣಿ ೭೩೫೩೯೬೮೭೮೭ ಈ ವಿಳಾಸಕ್ಕೆ ೩೧-೧-೨೦೨೫ರ ಶುಕ್ರವಾರದ ಒಳಗಡೆ ತಲುಪಿಸಬೇಕು ಎಂದು ಕಸಾಪ ಮೂಲ್ಕಿ ಘಟಕಾಧ್ಯಕ್ಷ ಮಿಥುನ ಕೊಡೆತ್ತೂರು ತಿಳಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ