ಪುನರೂರು ಪ್ರತಿಷ್ಠಾನದ ವತಿಯಿಂದ "ಪುನರೂರು ಸಂಭ್ರಮ"ಕಾರ್ಯಕ್ರಮ
Sunday, January 12, 2025
ಮುಲ್ಕಿ: ಪುನರೂರು ಪ್ರತಿಷ್ಠಾನದ ವತಿಯಿಂದ "ಪುನರೂರು ಸಂಭ್ರಮ"ಕಾರ್ಯಕ್ರಮ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ವಠಾರದಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮವನ್ನು ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕ ವೇದಮೂರ್ತಿ ಲಕ್ಷ್ಮೀನಾರಾಯಣ ಆಸ್ರಣ್ಣ ಉದ್ಘಾಟಿಸಿ ಆಶೀರ್ವಚನ ನೀಡಿ ಪುನರೂರು ಪ್ರತಿಷ್ಠಾನದ ವತಿಯಿಂದ ಮಕ್ಕಳಿಗೆ ಸಂಸ್ಕಾರ ಹಾಗೂ ಸಂಸ್ಕೃತಿ ನೀಡುವ ಕೆಲಸವಾಗಿದ್ದು ನಿರಂತರವಾಗಿರಲಿ ಎಂದು ಆಶೀರ್ವಚನ ನೀಡಿದರು.
ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷ ದರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು
ಮುಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಅತುಲ್ ಕುಡ್ವ ಶುಭಾಶಂಸನೆಗೈದರು
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಸುರತ್ಕಲ್ ಶ್ರೀ ನಾಟ್ಯಂಜಲಿ ಕಲಾ ಅಕಾಡೆಮಿಯ ನಿರ್ದೇಶಕ ವಿ. ಚಂದ್ರಶೇಖರ ನಾವಡ, ಕಿನ್ನಿಗೋಳಿ ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ,ಪುನರೂರು ಕ್ಷೇತ್ರದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್,ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷೆ ಎಚ್ ಕೆ ಉಷಾರಾಣಿ , ಅಧ್ಯಕ್ಷ ದೇವಪ್ರಸಾದ್ ಪುನರೂರು,ಪ್ರಧಾನ ಕಾರ್ಯದರ್ಶಿ
ಶ್ರೇಯಾ ಪುನರೂರು ಜನವಿಕಾಸ ಸಮಿತಿ ಅಧ್ಯಕ್ಷ ಶಶಿಕರ ಕೆರೆಕಾಡು ಮತ್ತಿತರರು ಉಪಸ್ಥಿತರಿದ್ದರು