ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಾನುವಾರ ರಾತ್ರಿ ಶ್ರೀ ದೇವರಿಗೆ ರಂಗ ಪೂಜೆ, ಬಲಿ ಉತ್ಸವ ಹಾಗೂ ಸಣ್ಣ ರಥೋತ್ಸವ ವಿಜೃಂಭಣೆಯಿಂದ ನಡೆಯಿತು
ಈ ಸಂದರ್ಭ ಕ್ಷೇತ್ರದ ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್, ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು,ಗೋಪಾಲಕೃಷ್ಣ ಉಪಾಧ್ಯಾಯ, ಶ್ರೀನಾಥ್ ಭಟ್, ಸೇವಾಕರ್ತರಾದ ಗುರುವಪ್ಪ ಕೋಟ್ಯಾನ್,ಪ್ರಮೀಳಾ ಜಯಂತ್ ಹೆಜ್ಮಾಡಿ, ನಾದಸ್ವರ ವಾದಕ ನಾಗೇಶ್ ಬಪ್ಪನಾಡು,ರಾಧಾಕೃಷ್ಣರಾವ್, ಅಕೌಂಟೆಟ್ ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.