ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಅವರಿಗೆ ಗೌರವ
Thursday, January 23, 2025
ಮುಲ್ಕಿ: ಶೈಕ್ಷಣಿಕ,ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯ ಜೊತೆಗೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸವಲತ್ತುಗಳನ್ನು ಒದಗಿಸಿ ಉನ್ನತ ಸಾಧನೆಗೈದ ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು ರವರು ಗೌರವಕ್ಕೆ ಅಭಿನಂದನಾರ್ಹರು ಎಂದು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು
ಅವರು ಕಿಲ್ಪಾಡಿಯ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಸಾಧಕರ ನೆಲೆಯಲ್ಲಿ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ರವರನ್ನು ಸನ್ಮಾನಿಸಿ ಮಾತನಾಡಿದರು.
ಸನ್ಮಾನ ಸ್ವೀಕರಿಸಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ ಯುವ ಜನಾಂಗ ಜೀವನದಲ್ಲಿ ಉತ್ತಮ ಶಿಕ್ಷಣ, ಸಂಸ್ಕೃತಿ, ಸಂಸ್ಕಾರ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡರೆ ಮಾತ್ರ ಸಾಧಕರಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.