ಶಿಕ್ಷಣ ನಮ್ಮ ಬದುಕನ್ನು ಕಟ್ಟಿಕೊಡುತ್ತದೆ - ಯು.ಟಿ ಖಾದರ್
Tuesday, January 28, 2025
ಮೂಲ್ಕಿ:ಶಿಕ್ಷಣ ನಮ್ಮ ಬದುಕನ್ನು ಕಟ್ಟಿಕೊಡುತ್ತದೆ, ಪ್ರೀತಿ ಸಹೋದರತೆಯಿಂದ ವ್ಯಕ್ತಿತ್ವದ ಸಮಾನತೆ ಪ್ರಾಮಾಣಿಕತೆ, ಜೀವನದಲ್ಲಿ ಇದ್ದರೆ ಸಾಧಕರಾಗಲು ಸಾಧ್ಯ ಎಂದು ರಾಜ್ಯ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಹೇಳಿದರು.
ಅವರು ಮೂಲ್ಕಿ ತಾಲ್ಲೂಕು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು ಒಂದು ಕೋಟಿ ವೆಚ್ಚದಲ್ಲಿ ವಿವೇಕ ಯೋಜನೆಯ ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಸರಕಾರಿ ಕಾಲೇಜುಗಳು ತಾಲೂಕು ವ್ಯಾಪ್ತಿಯಲ್ಲಿ ಖಾಸಗಿ ಕಾಲೇಜುಗಳಿಗೆ ಪೈಪೋಟಿ ನೀಡುತ್ತಿರುವ ವಾತಾವರಣ ನಿರ್ಮಾಣವಾಗಿದೆ. ಮುಂದಿನ ದಿನದಲ್ಲಿಯ ವಿದ್ಯಾರ್ಥಿ ನಿಲಯವನ್ನು ಸ್ಥಾಪಿಸುವ ಯೋಜನೆ ಇದೆ ಎಂದರು.
ಇಂಜಿನಿಯರ್ ಪ್ರಶಾಂತ್ ಆಳ್ವ ಅವರನ್ನ ಸನ್ಮಾನಿಸಲಾಯಿತು
ಮೂಲ್ಕಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಸತೀಶ್ ಅಂಚನ್, ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಎಸ್ ಡಿ ಎಂ ಸಿ ಅಧ್ಯಕ್ಷೆ ಯೋಗಿನಿ, ಕಾಮಗಾರಿ ನಡೆಸಿದ ಲಾಯ್ಡ್ ಮಿನೇಜಸ್, ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ, ಫ್ರೌಢಶಾಲಾ ಮುಖ್ಯ ಶಿಕ್ಷಕಿ ಜಯಲಕ್ಷ್ಮೀ, ಉಪನ್ಯಾಸಕಿ ರೇಖಾ ಬಿ ಎಂ ಉಪಸ್ಥಿತರಿದ್ದರು.