ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ,ಸಾಧಕರಿಗೆ ಗೌರವ
Friday, January 31, 2025
ಮುಲ್ಕಿ: ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮ ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿ ಮಾತನಾಡಿದರು.
ಕಸಾಪ ಮುಲ್ಕಿ ತಾಲೂಕು ಅಧ್ಯಕ್ಷ ಜೊಸ್ಸಿ ಪಿಂಟೊ, ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಕೆಎಸ್ ರಾವಗರ ಬಿಲ್ಲವ ಸಂಘದ ಅಧ್ಯಕ್ಷ ಮಹಾಬಲ ಸನಿಲ್, ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮನೋಹರ ಕೋಟ್ಯಾನ್, ವಿಜಯ ಕುಮಾರ್ ಕುಬೆವೂರು, ರಮಾನಾಥ ಸುವರ್ಣ ಕೊಳಚಿ ಕಂಬಳ,ಉದ್ಯಮಿ ಜೋನ್ ಕ್ವಾಡ್ರಾಸ್, ಹೊಸ ಅಂಗಣದ ಡಾ.ಹರಿಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್ ನಡಿಕುದ್ರು, ಜಯಪಾಲ ಶೆಟ್ಟಿಐಕಳ,ಬಂಕಿನಾಯಕರು,ರವಿಚಂದ್ರ ರಾವ್, ದಿನೇಶ್ ಶೆಟ್ಟಿ,ವಕೀಲ ರವೀಶ್ ಕಾಮತ್, ಮತ್ತಿತರರು ಉಪಸ್ಥಿತರಿದ್ದರು.