ಸ್ವಾಮೀ ವಿವೇಕಾನಂದರ 162ನೇ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ
Tuesday, January 21, 2025
ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ,ನೆಹರು ಯುವ ಕೇಂದ್ರ ಮಂಗಳೂರು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು,
ಜಿಲ್ಲಾಡಳಿತ,ದ.ಕ ಜಿಲ್ಲಾ ಪಂಚಾಯತ್,ಗ್ರಾಮ ಪಂಚಾಯತ್ ಪಡುಪಣಂಬೂರು,ತಾಲೂಕು ಮತ್ತು ಜಿಲ್ಲಾ ಯುವಜನ ಒಕ್ಕೂಟ,ದ.ಕ ಜಿಲ್ಲೆ ಇವರ ಮಾರ್ಗದರ್ಶನದಲ್ಲಿ
ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ
ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಫೋರ್ಟ್ಸ್ ಕ್ಲಬ್ (ರಿ)ತೋಕೂರು,ಹಳೆಯಂಗಡಿ ಇದರ ಆಶ್ರಯದಲ್ಲಿ ದಿವ್ಯ ಚೇತನ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯನ್ನು ಸಂಸ್ಥೆಯ ಸಭಾಂಗಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಪಡುಪಣಂಬೂರು ಗ್ರಾಮ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಅವರು ವಿವೇಕಾನಂದರ ಆದರ್ಶ ಚಿಂತನೆಗಳು ಹಿಂದಿನ ದಿನಗಳಿಗಿಂತ ಇಂದಿನ ಪರಿಸ್ಥಿತಿಗೆ ಅತೀ ಹೆಚ್ಚು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸದಾ ಕಾಲ ರಾಷ್ಟ್ರ ಹಿತದ ಕೆಲಸ ಕಾರ್ಯವನ್ನು ಯುವಕರು ಮಾಡಿದಾಗಲೇ ಭಾರತ ವಿಶ್ವ ಗುರುವಾಗಲು ಸಾಧ್ಯ ಎಂದರು.
ಸಂಸ್ಥೆಯ ಗೌರವಾಧ್ಯಕ್ಷ ಪ್ರಶಾಂತ್ ಕುಮಾರ್ ಬೇಕಲ್, ಅಧ್ಯಕ್ಷ ದೀಪಕ್ ಸುವರ್ಣ, ಕಾರ್ಯಾಧ್ಯಕ್ಷ ಸಂತೋಷ್ ದೇವಾಡಿಗ,ಜೊತೆ ಕಾರ್ಯದರ್ಶಿ ಚಂದ್ರ ಸುವರ್ಣ, ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ, ಆರೋಗ್ಯ ನಿಧಿ ಕಾರ್ಯದರ್ಶಿ ಜಗದೀಶ್ ಕೋಟ್ಯಾನ್,ಸದಸ್ಯರಾದ ಸಚಿನ್ ಆಚಾರ್ಯ, ಬಾಲಕೃಷ್ಣ, ಅರ್ಫಾಜ್,ಮಹಿಳಾ ಕಾರ್ಯಾಧ್ಯಕ್ಷೆ ಶ್ರೀಮತಿ ಯಶೋಧ ದೇವಾಡಿಗ,ಜೊತೆ ಕಾರ್ಯದರ್ಶಿ ಶ್ರೀಮತಿ ಸುರೇಖಾ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಶ್ರೀಮತಿ ಗೀತಾ ಶೆಟ್ಟಿಗಾರ್,ಶ್ರೀಮತಿ ನೀಮಾ ಸನಿಲ್, ಸದಸ್ಯೆಯರಾದ ಶ್ರೀಮತಿ ವಾಣಿ, ಶ್ರೀಮತಿ ಪ್ರಮೀಳಾ. ಶ್ರೀಮತಿ ಶೈಲಾ ಶೆಟ್ಟಿಗಾರ್, ಶ್ರೀಮತಿ ಚಂದ್ರಿಕಾ,ಶ್ರೀಮತಿ ಜಯಂತಿ ಶೆಟ್ಟಿಗಾರ್,ಶ್ರೀಮತಿ ಶರ್ಮಿಳಾ,ಶ್ರೀಮತಿ ಸುಷ್ಮಾ ಆಚಾರ್ಯ,ಶ್ರೀಮತಿ ಶ್ರೀಕಲಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.