ಎಕ್ಕಾರು:ಎಕ್ಕಾರು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಶ್ರೀಕಾಂತೇರಿ ಜುಮಾದಿ ದೈವದ ನೇಮೋತ್ಸವವು ರಾತ್ರಿ ವಿಜೃಂಭಣೆಯಿಂದ ಜರುಗಿತು.
ಈ ಸಂದರ್ಭ ಎಕ್ಕಾರು ಶ್ರೀ ಗೋಪಾಲಕೃಷ್ಣ ಮಠದ ವೇದಮೂರ್ತಿ ಹರಿದಾಸ ಉಡುಪ,ಎಕ್ಕಾರು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರಮನೆ(ತಿಮ್ಮ ಕಾವರು),ಪ್ರಸನ್ನ ಮುದ್ದ ನಡ್ಯೋಡಿಗುತ್ತು,ರತ್ನಾಕರ ಶೆಟ್ಟಿ ಬಡಕರೆ ಬಾಳಿಕೆ,ರಮೇಶ್ ಭಂಡಾರಿ ಮಿತ್ತೊಟ್ಟು ಬಾಳಿಕೆ,4 ಕರೆ ,32 ವರ್ಗ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಉಪಸ್ಥಿತರಿದ್ದರು.