
ಫೆ.28: ಪೂರ್ವಭಾವಿ ಸಿದ್ಧತೆ ಸಭೆ
Thursday, February 27, 2025
ಕೈಕಂಬ: ಅದ್ಯಪಾಡಿ ಶ್ರೀಆದಿನಾಥೇಶ್ವರ ದೇವಸ್ಥಾನದಲ್ಲಿ ಮಾ.9ರಿಂದ 25ರವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಹಾಗೂ ಜಾತ್ರೆ ಪೂರ್ವಭಾವಿ ಸಿದ್ಧತೆ ಸಭೆಯು ಶಾಸಕ ಡಾ। ಭರತ್ ಶೆಟ್ಟಿ ವೈ. ಅಧ್ಯಕ್ಷತೆಯಲ್ಲಿ ದೇವಸ್ಥಾನದ ಬ್ರಹ್ಮಕಲಶ ಕಾರ್ಯಾಲಯದಲ್ಲಿ ಫೆ.28 ರಂದು ಸಂಜೆ ನಡೆಯಲಿದೆ. ಕಂದಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ಬಜಪೆ ಪೊಲೀಸ್ ಠಾಣಾಧಿಕಾರಿ, ಪ್ರಾಥಮಿಕ ಆರೋಗ್ಯಕೇಂದ್ರದ ವೈದ್ಯಾಧಿಕಾರಿ, ಅಗ್ನಿಶಾಮಕ ದಳದ ಅಧಿಕಾರಿ, ಸಂಚಾರಿ ಪೊಲೀಸ್, ಮೆಸ್ಕಾಂ ನ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು ಕೈಕಂಬ ಮೆಸ್ಕಾಂ ಈ ಎಲ್ಲ ಅಧಿಕಾರಿಗಳು ಹಾಜರಾಗುವಂತೆ ಸೂಚಿಸಲಾಗಿದೆ.