ಮಂಗಳೂರು ಮಹಾನಗರ ಪಾಲಿಕೆಯಿಂದ ಯಕ್ಷಧ್ರುವ ಪಟ್ಲ ಫೌಂಡೇಶನಿಗೆ 10 ಲಕ್ಷ ರೂ ಫ್ರೋತ್ಸಾಹಧನ ವಿತರಣೆ
Saturday, February 15, 2025
ಮಂಗಳೂರು :ಮಂಗಳೂರು ಮಹಾಪಾಲಿಕೆಯ ವತಿಯಿಂದ ಯಕ್ಷಗಾನಕ್ಕೆ ಪ್ರೋತ್ಸಾಹ ನೀಡುವ ವಿಶೇಷ ಕಾರ್ಯಕ್ರಮದಡಿ ಕರಾವಳಿಯ ಗಂಡುಕಲೆ ಯಕ್ಷಗಾನವನ್ನು ಸರಕಾರಿ ಶಾಲೆಗಳಲ್ಲಿ ಉಚಿತವಾಗಿ ಕಲಿಸುವ ನಿಟ್ಟಿನಲ್ಲಿ ಯಕ್ಷಗಾನ ತರಬೇತಿ ತರಗತಿಗಳನ್ನು ರಾಜ್ಯಾದ್ಯಂತ ನಡೆಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನಿನ 'ಯಕ್ಷಗಾನಂ ವಿಶ್ವಗಾನಂ'ಯೋಜನೆಯಡಿ 2024-25ನೇ ಸಾಲಿನ ಬಜೆಟಿನಲ್ಲಿ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಸ್ಥಾಯೀ ಸಮಿತಿ ಅಧ್ಯಕ್ಷ ವರುಣ್ ಚೌಟ ಇವರು ಘೋಷಿಸಿದ ರೂ 10.00 ಲಕ್ಷದ ಪ್ರೋತ್ಸಾಹಧನವನ್ನು ಮೇಯರ್ ಮನೋಜ್ ಕುಮಾರ್ ಅವರು ಪಟ್ಲ ಫೌಂಡೇಶನಿನ ಕೇಂದ್ರೀಯ ಸಮಿತಿಯ ಜತೆಕಾರ್ಯದರ್ಶಿ ರವಿ ಶೆಟ್ಟಿ ಅಶೋಕನಗರ ಇವರ ಮೂಲಕ ಟ್ರಸ್ಟಿಗೆ ನೀಡಿದರು.
ಈ ಸಂದರ್ಭದಲ್ಲಿ ಮಹಾಗರಪಾಲಿಕೆಯ ಉಪಮೇಯರ್ ಭಾನುಮತಿ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ವಿಪಕ್ಷ ನಾಯಕ ಅನಿಲ್ ಕುಮಾರ್, ವಿವಿಧ ಸ್ಥಾಯಿಸಮಿತಿ ಅಧ್ಯಕ್ಷರುಗಳಾದ ಮನೋಹರ್ ಶೆಟ್ಟಿ, ಶ್ರೀಮತಿ ಸುಮಿತ್ರ ಕರಿಯ, ಶ್ರೀಮತಿ ಸರಿತ ಶಶಿಧರ್, ಶ್ರೀಮತಿ ವೀಣಾ ಮಂಗಳ ಮಾಜಿ ಮೇಯರ್ ಶಶಿಧರ ಹೆಗ್ದೆ ಉಪಸ್ಥಿತರಿದ್ದರು.
ಪಟ್ಲ ಫೌಂಡೇಶನ್ ಗೆ ಈ ಅನುದಾನವನ್ನು ಕೊಡಿಸುವಲ್ಲಿ ವಿಶೇಷವಾಗಿ ಸ್ಪಂದಿಸಿದ ಕಾರ್ಪೋರೇಟರ್ ಕದ್ರಿ ಮನೋಹರ್ ಶೆಟ್ಟಿ,,ಮೇಯರ್, ಮಾಜಿ ಮೇಯರ್ ಗಳು, ಆಡಳಿತ ಹಾಗೂ ವಿರೋಧ ಪಕ್ಷದ ಎಲ್ಲಾ ಕಾರ್ಪೊರೇಟರ್ ಗಳಿಗೆ ಯಕ್ಷದ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು ಹಾಗೂ ಕೇಂದ್ರೀಯ ಹಾಗೂ ಎಲ್ಲಾ ಪ್ರಾದೇಶಿಕ ಘಟಕಗಳು ಅಭಿನಂದನೆಗಳನ್ನು ಅರ್ಪಿಸಿದೆ.