-->


ಮಾ.1:ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 16ನೇ ವಾರ್ಷಿಕೋತ್ಸವ

ಮಾ.1:ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 16ನೇ ವಾರ್ಷಿಕೋತ್ಸವ

ಮೂಲ್ಕಿ :ಮೂಲ್ಕಿಯ ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ದೈವಸ್ಥಾನದ ಸೇವಾ ಸಮಿತಿಯ ಅಂಗ ಸಂಸ್ಥೆ 
ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 16ನೇ ವಾರ್ಷಿಕೋತ್ಸವ ಹಾಗೂ ಮಹಾ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆಯು ಮಾರ್ಚ್‌ 1 ರ ಶನಿವಾರದಂದು ಕೊಳಚಿಕಂಬಳದ ಶ್ರೀ ಜಾರಂದಾಯ ಧೂಮಾವತಿ ದೈವಸ್ಥಾನದ ವಠಾರದಲ್ಲಿ ಜರಗಲಿದೆ.ಮಾರ್ಚ್‌ 1 ರ ಶನಿವಾರ ಬೆಳಿಗ್ಗೆ 10 ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,ಮಧ್ಯಾಹ್ನ ಪ್ರಸಾದ ವಿತರಣೆ,ಅನ್ನ ಸಂತರ್ಪಣೆ ನಡೆಯಲಿದೆ.ಸಂಜೆ ನಡಯಲಿರುವ  ಧಾರ್ಮಿಕ ಸಭಾ ಕಾರ್ಯಕ್ರಮದ
ಅಧ್ಯಕ್ಷತೆಯನ್ನು ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘ (ರಿ.) ನ ಅಧ್ಯಕ್ಷ ವಾಮನ್ ಕೋಟ್ಯಾನ್ ವಹಿಸಲಿದ್ದು ಕಾರ್ಯಕ್ರಮವನ್ನು ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್ ಉದ್ಘಾಟಿಸಲಿದ್ದಾರೆ. ವಿದ್ವಾನ್ ಕೃಷ್ಣರಾಜ್ ಎನ್. ಭಟ್ ಬಪ್ಪನಾಡು ಶುಭಾಶಂಸನೆಗ್ಯೆಯಲಿದ್ದು ಲಯನ್ಸ್ ಕ್ಲಬ್, ಮೂಲ್ಕಿಯ ಅಧ್ಯಕ್ಷ ರೋಲ್ಪಿ ಡಿ ಕೋಸ್ತ,ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ,ಹಳೆಯಂಗಡಿಯ ಅಧ್ಯಕ್ಷ ವಸಂತ್ ಬೆರ್ನಾಡ್,ಬಿಲ್ಲವ ಸಂಘ (ರಿ.) ಹೆಜಮಾಡಿಯ ಅಧ್ಯಕ್ಷ ಮೋಹನ್‌ದಾಸ್ ಹೆಜಮಾಡಿ,ವಿಜಯಾ ರೈತರ ಸೇವಾ ಸಹಕಾರಿ ಸಂಘ ನಿ.,ಮೂಲ್ಕಿಯ ಅಧ್ಯಕ್ಷ ರಂಗನಾಥ ಶೆಟ್ಟಿ,ಬಿರುವೆರ್ ಕುಡ್ಲ (ರಿ.), ಮೂಲ್ಕಿ ಘಟಕದ ಅಧ್ಯಕ್ಷ ಕಿಶೋರ್ ಸಾಲ್ಯಾನ್, ಸ್ವಯಂಭೂಲಿಂಗೇಶ್ವರ ಕ್ಷೇತ್ರ, ದೊಡ್ಡಿಕಟ್ಟ, ಬಜಪೆಯ ಅಧ್ಯಕ್ಷ ಲೋಕೇಶ್ ಆರ್. ಅಮೀನ್ ಮುಖ್ಯ ಅತಿಥಿಗಳಾಗಿಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ,
ವಿದ್ಯಾನಿಧಿ ವಿತರಣೆ, ಪ್ರತಿಭಾ ಪುರಸ್ಕಾರ ನಡೆಯಲಿದ್ದು ರಾತ್ರಿಮಹಿಳೆಯರಿಂದ ಮತ್ತು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ,ಬೆನಕ ಆರ್ಟ್ಸ್ ಕುಡ್ಲ ಅರ್ಪಿಸುವ ಪೊರಿಪುದಪ್ಪೆ ಜಲದುರ್ಗೆ;ಚಿತ್ರಾಪುರದ ಸತ್ಯ ಕಥಾ ಆಧಾರಿತ ತುಳು ಪೌರಾಣಿಕ ನಾಟಕ ಪ್ರದರ್ಶನ ಜರಗಲಿದೆಯೆಂದು ಪ್ರಕಟಣೆ ತಿಳಿಸಿದೆ.

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article