Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಹೊಯ್ಗೆಗುಡ್ಡೆ ಶ್ರೀ ಉಮಾಮಹೇಶ್ವರ ದೇವರಿಗೆ ವಿಜೃಂಭಣೆಯ ಬ್ರಹ್ಮಕಲಶಾಭಿಷೇಕ

ಮುಲ್ಕಿ: ಪಡುಪಣಂಬೂರು ಹೊಯ್ಗೆಗುಡ್ಡೆ ಶ್ರೀ ಉಮಾಮಹೇಶ್ವರ ಮಹಾ ಗಣಪತಿ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ವಿಜೃಂಭಣೆಯಿಂದ ನಡೆಯಿತು.
 ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ಪ್ರಾತಃಕಾಲ ವಿಶೇಷ ಪ್ರಾರ್ಥನೆ , ಬೆಳಗ್ಗೆ 9:15ಕ್ಕೆ ಮೀನ ಲಗ್ನ ಮುಹೂರ್ತದಲ್ಲಿ ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ, ರುದ್ರ ಯಾಗ, ಅಲಂಕಾರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅವಸ್ಕೃತ ಬಲಿ, ಪಲ್ಲಪೂಜೆ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಮಹಾಮಂತ್ರಾಕ್ಷತೆ ನಡೆಯಿತು.
ರಾತ್ರಿ ಶ್ರೀ ದೇವರಿಗೆ ಮಹಾಪೂಜೆ, ರಂಗ ಪೂಜೆ, ಅಂಕುರಾರೋಹಣ, ವಾರ್ಷಿಕ ಜಾತ್ರಾ ಮಹೋತ್ಸವ ಆರಂಭಗೊಂಡಿತು. 
ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಪ್ರಧಾನ ಅರ್ಚಕ ರಂಗನಾಥ ಭಟ್, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು,ಡಾ ಹರಿಕೃಷ್ಣ ಪುನರೂರು,ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ರಾಮದಾಸ್ ಪುತ್ರನ್ ಚಿತ್ರಾಪು, ಹಿರಿಯ ಸಾಹಿತಿ ಶಕುಂತಲಾ ಭಟ್, ಎಸ್ ಕೆ ಪಿ ಎ ನ ಮೋಹನ್ ರಾವ್ ಮತ್ತಿತರರು ಉಪಸ್ಥಿತರಿದ್ದರು.