ಫೆ.12 ರಿಂದ 17ರ ವರೆಗೆ ಕಾರ್ನಾಡ್ ಹರಿಹರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅಷ್ಟ ಬಂಧ ಬ್ರಹ್ಮಕಲಶಾಭಿಷೇಕ- ಮೊಕ್ತೇಸರ ಎಂ.ಎಚ್. ಅರವಿಂದ ಪೂಂಜಾ
Monday, February 10, 2025
ಮೂಲ್ಕಿ: ಸುಮಾರು 600 ವರ್ಷಗಳ ಇತಿಹಾಸವಿರುವ ಅತೀ ಪುರಾತನ ದೇವಸ್ಥಾನಗಳಲ್ಲಿ ಒಂದಾದ ಕಾರ್ನಾಡ್ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವರಿಗೆ ಫೆ .12 ರಿಂದ 17ರ ವರೆಗೆ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಅಷ್ಟ ಬಂಧ ಬ್ರಹ್ಮಕಲಶಾಭಿಷೇಕ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಮೊಕ್ತೇಸರ ಎಂ.ಎಚ್. ಅರವಿಂದ ಪೂಂಜಾ ಹೇಳಿದರು. ಅವರಿಂದು
ಕಾರ್ನಾಡ್ ಹರಿಹರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನು ನೀಡಿದರು.ಫೆ.12ರಂದು ಬುಧವಾರ ಬೆಳಿಗ್ಗೆ 9:30ಕ್ಕೆ ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಕೃಷ್ಣ ಭಟ್ ರವರು ಉಗ್ರಾಣ ಮುಹೂರ್ತ ನೆರವೇರಿಸಲಿದ್ದು, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು , ಬಪ್ಪನಾಡು ದೇವಸ್ಥಾನದ ಆಡಳಿತ ಮೊಕ್ತೇಸರ ಎನ್ ಎಸ್ ಮನೋಹರ ಶೆಟ್ಟಿ, ಕ.ಸಾ.ಪ.ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು,ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಮಣ್ಯ ದೇವಸ್ಥಾನದ ಧರ್ಮದರ್ಶಿ ಯಾಜೀ ಡಾ. ಎಚ್ ನಿರಂಜನ ಭಟ್,ಮುಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಅತುಲ್ ಕುಡ್ವ, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ ದೀಪ ಪ್ರಜ್ವಲನೆ ಮಾಡಲಿದ್ದಾರೆ.
ಸಂಜೆ ಕ್ಷೇತ್ರದಲ್ಲಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನಿಟ್ಟೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಎನ್ ವಿನಯ ಹೆಗ್ಡೆ ನೆರವೇರಿಸಲಿದ್ದು ಕಟೀಲು ಕ್ಷೇತ್ರದ ಅರ್ಚಕ ವೇದಮೂರ್ತಿ ಶ್ರೀ ಹರಿನಾರಾಯಣ ದಾಸ ಆಸ್ರಣ್ಣ ಆಶೀರ್ವಚನ ನೀಡಲಿದ್ದಾರೆ. ವೇದಿಕೆಯಲ್ಲಿ ಉದ್ಯಮಿ ಸುಧೀರ್ ವಿ ಶೆಟ್ಟಿ, ಸಂಸದ ಬೃಜೇಶ್ ಚೌಟ ಸಹಿತ ಅನೇಕ ಗಣ್ಯರು ಉಪಸ್ಥಿತರಿರುವರು ಎಂದು ತಿಳಿಸಿದರು.
ಫೆ.16ರಂದು ರವಿವಾರ ಬೆಳಿಗ್ಗೆ 8:15ಕ್ಕೆ ಕುಂಭ ಲಗ್ನದಲ್ಲಿ ಶ್ರೀ ವಿಷ್ಣುಮೂರ್ತಿ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ನಡೆಯಲಿದೆ.
ಪ್ರತಿದಿನ ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಲಿದ್ದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಮುಖ್ಯವಾಗಿ ಬ್ರಹ್ಮಕಲಶೋತ್ಸವದಲ್ಲಿ ಸ್ವಚ್ಛತೆ ಹಾಗೂ ಸಮಯ ಪರಿಪಾಲನೆಗೆ ಹೆಚ್ಚಿನ ಮಹತ್ವ ನೀಡಲಾಗುವುದು ಎಂದರು.
ಹೊರೆ ಕಾಣಿಕೆ ಸಮಿತಿಯ ಅಧ್ಯಕ್ಷ ಸುನಿಲ್ ಆಳ್ವ ಅವರು ಮಾತನಾಡಿ
ಫೆ.12ರ ಸಂಜೆ 4 ಗಂಟೆಗೆ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನಡೆದು ಭವ್ಯ ಮೆರವಣಿಗೆಯಲ್ಲಿ ಕಾರ್ನಾಡ್ ಹರಿಹರ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಹೊರೆ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.
ಹೊರೆ ಕಾಣಿಕೆ ಸಮರ್ಪಣೆ ಕಾರ್ಯಕ್ರಮವನ್ನು ಉದ್ಯಮಿ ಕೆ ಪ್ರಕಾಶ್ ಶೆಟ್ಟಿ ಬೆಂಗಳೂರು ಉದ್ಘಾಟಿಸಲಿದ್ದು ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್ ಗೌರವ ಉಪಸ್ಥಿತರಿರುವರು ಎಂದರು
ಪತ್ರಿಕಾಗೋಷ್ಠಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಹಯಗ್ರೀವ ಪಡ್ಡಿಲ್ಲಾಯ,ವ್ಯವಸ್ಥಾಪನಾ ಸಮಿತಿಯ ಸದಸ್ಯ ಶಶೀoದ್ರ ಎಂ. ಸಾಲ್ಯಾನ್, ಸ್ವಾಗತ ಸಮಿತಿಯ ಅಧ್ಯಕ್ಷ ಜೀವನ್.ಕೆ. ಶೆಟ್ಟಿ ಕಾರ್ನಾಡ್ ,ಕೋಶಾಧಿಕಾರಿ ಸುರೇಶ್ ರಾವ್, ಡಾ. ಕಿಶೋರ್ ಕುಮಾರ್ ಶೇಣಿ,ಅನ್ನ ಸಂತರ್ಪಣಾ ಸಮಿತಿಯ ಸಂಚಾಲಕ ಕೃಷ್ಣ ಶೆಟ್ಟಿ, ಕಾರ್ಯದರ್ಶಿ ಯಶವಂತ ಸಾಲ್ಯಾನ್, ಪ್ರವೀಣ್ ಕೋಟ್ಯಾನ್ ಕಾರ್ನಾಡ್ ಧರ್ಮಸ್ತಾನ,ಪ್ರಚಾರ ಸಮಿತಿಯ ಶಿವಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಸಮಿತಿಯ ವೈ ಎನ್ ಸಾಲ್ಯಾನ್ ಸ್ವಾಗತಿಸಿ ನಿರೂಪಿಸಿದರು