ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ ಹಳೆಯಂಗಡಿ ಇದರ ದೇವಾಡಿಗ ಭವನದ ನೆಲ ಅಂತಸ್ತು ವಿನ ಲೋಕಾರ್ಪಣೆ
Monday, February 17, 2025
ಪಾವಂಜೆ:ಕುಲಕಸುಬಿಗೆ ಅನುಗುಣವಾಗಿ ಹಿಂದಿನ ಕಾಲದಲ್ಲಿ ಜಾತಿಗಳನ್ನು ವಿಂಗಡನೆ ಮಾಡಲಾಗಿದ್ದು,ಅದರಲ್ಲೂ ದೇವರಿಗೆ ಪ್ರಿಯವಾದ ಹತ್ತಿರವಾದ ದೇವಾಡಿಗ ಸಮಾಜವೂ ಒಂದಾಗಿದೆ ಎಂದು ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.ಅವರು ಆದಿತ್ಯವಾರದಂದು ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ ಹಳೆಯಂಗಡಿ ಇದರ ದೇವಾಡಿಗ ಭವನದ ನೆಲ ಅಂತಸ್ತು ವಿನ ಲೋಕಾರ್ಪಣೆ ಗೊಳಿಸಿ ಮಾತನಾಡಿದರು. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಒಂದು ಕೋಟಿ ರೂ. ಅನುದಾನವನ್ನು ಸಂಘದ ಕಟ್ಟಡಕ್ಕೆ ಘೋಷಿಸಲಾಗಿತ್ತು. ಆದರೆ ಈಗಿನ ಸರಕಾರದ ಬೊಕ್ಕಸದಲ್ಲಿ ಹಣವಿಲ್ಲದ ಕಾರಣ ಮಂಜೂರಾದ ಹಣ ಬಿಡುಗಡೆಯಾಗದೆ ಸಮಸ್ಯೆಯಾಗಿದೆ. ಮುಂದಿನ ದಿನಗಳಲ್ಲಿ ನನ್ನ ಶಾಸಕರ ನಿಧಿಯಿಂದ 25 ಲಕ್ಷ ರೂ. ನೀಡುತ್ತೇನೆ ಮತ್ತು ಸರಕಾರದ ಅನುದಾನ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಇಲ್ಲಿ ನಿರ್ಮಾವಾಗಿರುವ ಭವ್ಯವಾದ ದೇವಾಡಿಗ ಭವನ ಮುಂದಿನ ದಿನಗಳಲ್ಲಿ ಸಂಪೂರ್ಣಗೊಂಡು ಸಮಾಜದ ಜನರಿಗೆ ಅನುಕೂಲವಾಗುವ ರೀತಿ ಬೆಳೆಯಲಿ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್,
ವಿಶ್ವ ದೇವಾಡಿಗ ಮಹಾಮಂಡಲದ ಅಧ್ಯಕ್ಷ ಧರ್ಮಪಾಲ್ ಯು. ದೇವಾಡಿಗ ಹಾಗೂ ಮೊದಲಾದವರು ಮಾತನಾಡಿದರು.
ವೇದಿಕೆಯಲ್ಲಿ ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ ಇದರ ಅಧ್ಯಕ್ಷ ಅಣ್ಣಪ್ಪ ದೇವಾಡಿಗ, ಕೃಷ್ಣ ಹೆಗ್ಡೆ ಮಿಯಾರು, ವಸಂತ್ ಬೆರ್ನಾರ್ಡ್, ರವಿ ಎಸ್. ದೇವಾಡಿಗ ಮಾಜಿ ಅಧ್ಯಕ್ಷರು ಮುಂಬೈ ದೇವಾಡಿಗ ಸಂಘ, ಗ್ರಾಮ ಪಂಚಾಯತ್ ಹಳೆಯಂಗಡಿ ಅಧ್ಯಕ್ಷೆ ಪೂರ್ಣಿಮಾ, ನಾಸಿಕ್ ಹೋಟೆಲ್ ಉದ್ಯಮಿ ರವೀಶ್ ಮೂಲ್ಕಿ, ದೇವಾಡಿಗ ಸಂಘ ಮುಂಬೈ ಇದರ ಅಧ್ಯಕ್ಷ ಪ್ರವೀಣ್ ನಾರಾಯಣ್, ಮಾಜಿ ಅಧ್ಯಕ್ಷ ವಾಸು ದೇವಾಡಿಗ, ಉದ್ಯಮಿ ನಾಗರಾಜ್ ಪಡುಕೋಣೆ, ಕೊಲ್ಲೂರು ಕ್ಷೇತ್ರದ ವ್ಯವಸ್ಥಾಪನಾ ಮಂಡಳಿ ಸದಸ್ಯ ಆಲೂರು ರಘುರಾಮ ದೇವಾಡಿಗ, ಅಶೋಕ್ ಮೊಯಿಲಿ, ರತ್ನಾಕರ್ ಜಿ.ಎಸ್., ಹಿರಿಯಡ್ಕ ಮೋಹನ್‌ದಾಸ್, ನಿವೃತ್ತ ಪ್ರಾಂಶುಪಾಲ ಬಾಬು ದೇವಾಡಿಗ ಆಂಬ್ಲಮೊಗರು, ಕೆ.ಜೆ.ದೇವಾಡಿಗ, ದೇವಾಡಿಗರ ಸೇವಾ ಸಂಘ ಉಡುಪಿ ಇದರ ಅಧ್ಯಕ್ಷ ಗಣೇಶ್ ದೇವಾಡಿಗ ಅಂಬಲಪಾಡಿ, ಹಳೆಯಂಗಡಿ ಬಿಲ್ಲವ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್, ಮಹಿಳಾ ವೇದಿಕೆ ಅಧ್ಯಕ್ಷೆ ವಿಜಯಲಕ್ಷ್ಮಿ ಜನಾರ್ಧನ್, ಯುವವೇದಿಕೆ ಅಧ್ಯಕ್ಷ ಗಣೇಶ್ ದೇವಾಡಿಗ ಪಂಜ, ಕಟ್ಟಡ ಸಮಿತಿಯ ಪರಮೇಶ್ವರ್, ಮೀರಾ ಬಾಯಿ ಕೆ., ವಿಜಯಲಕ್ಷ್ಮಿ ಜನಾರ್ಧನ್, ರಮೇಶ್ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಸಂತಿ ದೇವಾಡಿಗ ಪಡುಮನೆ ಹಾಗೂ ಗಂಗಾ ಡಿ. ದೇವಾಡಿಗ ಪಾವಂಜೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ನೇಹಾ ಯಾದವ ದೇವಾಡಿಗ ಹಳೆಯಂಗಡಿ ಇವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.
ಯಾದವ ದೇವಾಡಿಗ ಅತಿಥಿಗಳನ್ನು ಸ್ವಾಗತಿಸಿದರು. ಜನಾರ್ಧನ್ ಪಡುಪಣಂಬೂರು ಪ್ರಾಸ್ತಾವಿಕ ಮಾತನ್ನಾಡಿದರು.
ಬೆಳಗ್ಗೆ ಗಣಪತಿ ಹೋಮ, ಪ್ರವೇಶ, ಸಾಮೂಹಿಕ ಶ್ರೀ ಶನೀಶ್ವರ ಪೂಜೆ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಹಾಪೂಜೆ ನಡೆಯಿತು. ಸಭಾ ಕಾರ್ಯಕ್ರಮದ ನಂತರ ಮಹಾ ಅನ್ನಸಂತರ್ಪಣೆ ಜರುಗಿತು.ಸತೀಶ್ ಇಂದಿರಾನಗರ ವಂದಿಸಿದರು. ರಾಮದಾಸ್ ಪಾವಂಜೆ ಕಾರ್ಯಕ್ರಮ ನಿರೂಪಿಸಿದರು