ಸುಮಾರು 63 ಲಕ್ಷ ವೆಚ್ಚದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ
Monday, March 10, 2025
ಆದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಶುಭ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಶೇಷ ಮುತುವರ್ಜಿಯಲ್ಲಿ ಸುಮಾರು 63 ಲಕ್ಷ ವೆಚ್ಚದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಇಂದು ನೆರವೇರಿತು.
ಮಾನ್ಯ ಶಾಸಕರ ವಿಶೇಷ ಪ್ರಯತ್ನದಲ್ಲಿ ಸುಮಾರು 10 ಲಕ್ಷ ರೂಪಾಯಿ ವೆಚ್ಚದ ತಡೆಗೋಡೆ, 8 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ರಸ್ತೆ, 15 ಲಕ್ಷ ರೂಪಾಯಿ ವೆಚ್ಚದಲ್ಲಿ ಇಂಟರ್ ಲಾಕ್ ಅಳವಡಿಕೆ, 10 ಲಕ್ಷ ರೂಪಾಯಿ ವೆಚ್ಚದಲ್ಲಿ ಆದ್ಯಪಾಡಿ ದೇವಸ್ಥಾನದಿಂದ ಅರ್ಬಿಕೋಡಿ ಮತ್ತು ಆದ್ಯಪಾಡಿ ದೇವಸ್ಥಾನ ದಿಂದ ಆದ್ಯಪಾಡಿ ಶಾಲೆ ವರೆಗಿನ ರಸ್ತೆ ಬದಿಯಲ್ಲಿ ದಾರಿದೀಪ ಅಳವಡಿಕೆ ಹಾಗೂ ಸಂಸದರ ಅಭಿವೃದ್ಧಿ ನಿಧಿಯ ಸುಮಾರು 20 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಕಾಮಗಾರಿಯು ಲೋಕಾರ್ಪಣೆಯಾಯಿತು.
ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಪಂಚಾಯತ್ ಅಧ್ಯಕ್ಷರು ಸದಸ್ಯರು, ಪಕ್ಷದ ಕಾರ್ಯಕರ್ತರು, ಭಗವದ್ಭಕ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.