ಕಿಯೋನಿಕ್ಸ್ ಐ ಟಿ ಪಾರ್ಕ್ ಸ್ಥಾಪನೆಗೆ ಮಹತ್ವದ ಸಭೆ ಸ್ಥಳ ಪರಿಶೀಲನೆ
Sunday, March 9, 2025
ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ನೀಡಿದ ಮನವಿಯ ಮೇರೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬ್ಲೂ ಹೆರಿ ಹಿಲ್ಸ್ ಬಳಿ ಕಿಯೋನಿಕ್ಸ್ ಸಾಫ್ಟ್ವೇರ್ ಪಾರ್ಕ್ ನಿರ್ಮಾಣದ ಕುರಿತು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಕಿಯೋನಿಸ್ಕ್ ಅಧ್ಯಕ್ಷರಾದ ಶರತ್ ಬಚ್ಚೆಗೌಡ ಹಾಗೂ ವಿವಿಧ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸ್ಥಳ ಪರಿಶೀಲನೆ ನಡೆಯಿತು, ಇದೇ ವೇಳೆ ರಸ್ತೆ ಅಗಲೀಕರಣದ ಬಗ್ಗೆಯೂ ಚರ್ಚೆ ನಡೆಸಲಾಯಿತು.
ಆ ಬಳಿಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ನೂತನ ಐಟಿ-ಬಿಟಿ ಪಾರ್ಕ್ ನಿರ್ಮಾಣಕ್ಕೆ ಸಂಬಂಧಪಟ್ಟ ಮಹತ್ವದ ಸಭೆಯಲ್ಲಿ ಕಿಯೋನಿಸ್ಕ್ ಅಧ್ಯಕ್ಷರಾದ ಶರತ್ ಬಚ್ಚೆಗೌಡ, ಶಾಸಕರಾದ ಡಾ. ವೈ ಭರತ್ ಶೆಟ್ಟಿ, ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶ್ರೀ ಮಂಜುನಾಥ್ ಭಂಡಾರಿ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ಮುಲ್ಲೈ ಮುಗಿಲನ್, ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತರು, ಕಿಯೋನಿಸ್ಕ್ ನ ವ್ಯವಸ್ಥಾಪಕ ನಿರ್ದೇಶಕರು, ಕ್ರೆ ಡಾಯಿ ಅಸೋಸಿಯೇಷನ್ ಸದಸ್ಯರು ಹಾಗೂ ಸಂಬಂಧಪಟ್ಟ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭ ಮಾತನಾಡಿದ ಶಾಸಕರಾದ ಡಾ. ಭರತ್ ಶೆಟ್ಟಿ ಅವರು ಸರಕಾರಿ ಖಾಸಗಿ ಸಹಭಾಗಿತ್ವದಲ್ಲಿ ಐಟಿ ಸೆಕ್ಟರ್ ಅನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ನಿಟ್ಟಿನಲ್ಲಿ ಸರಕಾರ ತ್ವರಿತ ಹೆಜ್ಜೆಯನ್ನು ಇಡಬೇಕಿದೆ ಎಂದು ಹೇಳಿದರು.
ಮಂಗಳೂರು ಶಿಕ್ಷಣ ಕ್ಷೇತ್ರದ ಹಬ್ ಆಗಿದ್ದು
ಪ್ರತಿ ವರ್ಷ ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಹೊರಗೆ ಬರುತ್ತಾರೆ. ಉನ್ನತ ತಂತ್ರಜ್ಞಾನ ಉದ್ಯೋಗಕ್ಕಾಗಿ ಬೆಂಗಳೂರು ಇಲ್ಲವೇ ಹೊರದೇಶವನ್ನು ಅವಲಂಬಿಸಬೇಕಾಗುತ್ತದೆ.
ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಸ್ಟಾರ್ಟ್ ಅಪ್
ಯೋಜನೆಗೂ ಸೂಕ್ತ ವೇದಿಕೆ ಇಲ್ಲದೆ ಪ್ರತಿಭಾ ಫಲಾಯನವಾಗುತ್ತಿದೆ. ಈ ನಿಟ್ಟಿನಲ್ಲಿ ಕಿಯೋನಿಕ್ಸ್ ಐಟಿ ಪಾರ್ಕ್ ಉತ್ತಮ ಅವಕಾಶವಾಗಬಲ್ಲದು ಎಂದು ಹೇಳಿದರು.